ಚುನಾವಣೆಗೆ ಬಿಜೆಪಿ ಸಜ್ಜು

Webdunia
ಶನಿವಾರ, 18 ಜೂನ್ 2022 (13:46 IST)
ಚಿತ್ರದುರ್ಗ : ಕೋಟೆನಾಡು ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಜನಪ್ರತಿನಿಧಿಗಳ ಸಮಾವೇಶ ನಡೆಯಲಿದ್ದು, ಇಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಪಾಲ್ಗೊಳ್ಳಲಿದ್ದಾರೆ.

ಜಿಲ್ಲೆಯ ಮುರುಘಾಮಠದ ಅನುಭವ ಮಂಟಪ ಸಭಾಂಗಣದಲ್ಲಿ ಈ ಸಮಾವೇಶ ನಡೆಯಲಿದ್ದು, ಜೆ.ಪಿ. ನಡ್ಡಾ ಅವರು ಮಧ್ಯಾಹ್ನ ಸುಮಾರು 3:45ಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಎಸ್.ಜೆ.ಎಮ್ ಆಂಗ್ಲ ಮಾಧ್ಯಮ ಶಾಲೆ ಆವರಣದ ಹೆಲಿಪ್ಯಾಡ್ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 4 ಗಂಟೆಗೆ ಮುರುಘಾಮಠಕ್ಕೆ ಭೇಟಿ ನೀಡಿ, ಡಾ.ಶಿವಮೂರ್ತಿ ಮುರುಘಾ ಶರಣರ ದರ್ಶನ ಪಡೆಯಲಿದ್ದಾರೆ.

ಕೋಟೆನಾಡಿನಿಂದ 2023ರ ಚುನಾವಣೆಗೆ ಬಿಜೆಪಿ ರಣಕಹಳೆ ಊದಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದು, ಸದ್ಯ ಜಿಲ್ಲೆಯ 6 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಅಷ್ಟೇ ಅಲ್ಲದೇ ಚಿತ್ರದುರ್ಗ ಲೋಕಸಭೆ ಕ್ಷೇತ್ರವನ್ನೂ ಬಿಜೆಪಿ ಗೆದ್ದಿದೆ. ಈ ಹಿನ್ನೆಲೆಯಲ್ಲಿ ಕೇಸರಿಪಡೆಯ ಭದ್ರಕೋಟೆಯಾದ ಕೋಟೆನಾಡಿನಿಂದ ಮತ್ತೊಮ್ಮೆ ಕಹಳೆ ಊದಲು ಸಜ್ಜಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಸಿಎಂ ಕುರ್ಚಿ ಕಿತ್ತಾಟಕ್ಕೆ ಬ್ರೇಕ್ ಬೆನ್ನಲ್ಲೇ ಸಚಿವ ಮಹದೇವಪ್ಪ ಹೊಸ ಬಾಂಬ್

ರಾಹುಲ್ ಗಾಂಧಿಗೆ ಚಿತ್ರಹಿಂಸೆ ನೀಡಲು ಬಿಜೆಪಿಯಿಂದ ತನಿಖಾ ಸಂಸ್ಥೆ ದುರ್ಬಳಕೆ: ಶಿವಕುಮಾರ್

ಮುಂದಿನ ಸುದ್ದಿ
Show comments