Select Your Language

Notifications

webdunia
webdunia
webdunia
webdunia

ಬಿಜೆಪಿ ಪರಿವರ್ತನಾ ಯಾತ್ರೆ ವಿಫಲ: ಬಿಜೆಪಿ ಮುಖಂಡ ಸೊಗಡು ಶಿವಣ್ಣ

ಬಿಜೆಪಿ ಪರಿವರ್ತನಾ ಯಾತ್ರೆ ವಿಫಲ:  ಬಿಜೆಪಿ ಮುಖಂಡ ಸೊಗಡು ಶಿವಣ್ಣ
ಬೆಂಗಳೂರು , ಭಾನುವಾರ, 5 ನವೆಂಬರ್ 2017 (11:19 IST)
ಬಿಜೆಪಿ ಅಪ್ಪ ಮಕ್ಕಳ ಪಾರ್ಟಿಯಂತಾಗಿದೆ ಎಂದು ಬಿಜೆಪಿ ಮುಖಂಡ ಮಾಜಿ ಸಚಿವ ಸೊಗಡು ಶಿವಣ್ಣ ಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಪರಿವರ್ತನಾ ರ್ಯಾಲಿ ವಿಫಲವಾಗಿದೆ. ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗುತ್ತಿಲ್ಲ, ಜನರನ್ನು 500 , 1000 ರೂಪಾಯಿಗಳನ್ನು ನೀಡಿ ಕರೆತರಲಾಗಿತ್ತು. ಆದಾಗ್ಯೂ ಯಾತ್ರೆ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ. 
 
ಕೆಲವರು ತಮ್ಮದೇ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕಿಡಿಕಾರಿದ್ದಾರೆ.
 
ಬಿಜೆಪಿ ಪರಿವರ್ತನಾ ಯಾತ್ರೆ ಆಗ್ತಿಲ್ಲ. ಕೆಜಿಪಿ ಯಾತ್ರೆಯಾಗಿದೆ. ಕೆಜಿಪಿಯಲ್ಲಿದ್ದವರಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಸಂಸದೆ ಶೋಭಾ ಕರಂದ್ಲಾಜೆ ಇತರ ನಾಯಕರ ನಡುವಿನ ಸಮನ್ವಯದ ಕೊರತೆಯಿಂದಾಗಿ ಪರಿವರ್ತನಾ ಯಾತ್ರೆ ವಿಫಲವಾಗಿದೆ. ಕಾರ್ಯಕರ್ತರನ್ನು ಬಿಟ್ಟು ನಾನು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ. 
 
ಮುಂದಿನ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪಬ್ಲಿಸಿಟಿಗಾಗಿ ಕಮಲ್ ಹಾಸನ್ ಹೀಗೆ ಮಾಡಿದರಂತೆ!