Publish Date: Thu, 25 Jan 2018 (13:31 IST)
Updated Date: Thu, 25 Jan 2018 (14:03 IST)
ಮೈಸೂರು : ಮೈಸೂರಿನಲ್ಲಿ ನಡೆಯಲಿರುವ ಬಿಜೆಪಿ ನವ ಕರ್ನಾಟಕ ಪರಿವರ್ತನಾ ಸಮಾವೇಶಕ್ಕೆ ಸಂಬಂಧಿಸಿದಂತೆ ಕೊನೆಯ ಕ್ಷಣದಲ್ಲಿ ಅಮಿತ್ ಶಾ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮಹದಾಯಿ ನೀರು ಹಂಚಿಕೆ ಸಂಬಂಧಿಸಿದ ಬಂದ್ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟ, ಸುತ್ತೂರು ಮಠಕ್ಕೆ ಅಮಿತ್ ಶಾ ಅವರು ಭೇಟಿ ಮಾಡುವುದನ್ನು ರದ್ದು ಮಾಡಿ ಏರ್ ಫೋರ್ಟ್ ನಿಂದ ನೇರವಾಗಿ ಸಮಾವೇಶ ಸ್ಥಳಕ್ಕೆ ಆಗಮಿಸಲಿದ್ದಾರೆ ಎಂದು ಅಮಿತ್ ಶಾ ಕಚೇರಿಯಿಂದ ಮೈಸೂರು ಪೊಲೀಸರಿಗೆ ಮಾಹಿತಿ ಕಳುಹಿಸಿದ್ದಾರೆ.
ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶ ಮುಗಿದ ನಂತರ ಅವರು ನವದೆಹಲಿಗೆ ತೆರಳಿದ್ದಾರೆ ಎಂದು ಕಚೇರಿಯ ಸಿಬ್ಬಂದಿ ಮಾಹಿತಿ ನೀಡಿ, ಪರಿಷ್ಕೃತ ಕಾರ್ಯಕ್ರಮದ ಪಟ್ಟಿಯನ್ನು ರವಾನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ