Publish Date: Sat, 26 May 2018 (16:49 IST)
Updated Date: Sat, 26 May 2018 (16:50 IST)
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಚುನಾವಣೆ ಸೋಲಿಗೆ ನಾಯಕರೇ ನೇರ ಹೊಣೆ ಎಂದು ಕಾರ್ಯಕರ್ತರು ವಾಗ್ದಾಳಿ ನಡೆಸಿದರು.
ಬೇಲೂರಿನ ಮಂಜುನಾಥ ಕಲ್ಯಾಣ ಮಂಟಪದಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಹುಲ್ಲಹಳ್ಳಿ ಸುರೇಶ್ ಪಾಲ್ಗೊಂಡಿದ್ದರು. ತಾಲ್ಲೂಕು ಬಿಜೆಪಿ ನಾಯಕರ ವೈಫಲ್ಯದಿಂದ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲು ಎಂದು ಕಾರ್ಯಕರ್ತರು ಹಿರಿಯ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಲಿನ ಪರಾಮರ್ಶೆ ಸಂದರ್ಭದಲ್ಲಿ ಪ್ರಶ್ನೆಗಳನ್ನು ಕೇಳದಂತೆ ನಾಯಕರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಬೇಸರಗೊಂಡ ಕಾರ್ಯಕರ್ತರು ಪಕ್ಷದ ನಾಯಕರ ವಿರುದ್ಧವೇ ಘೋಷಣೆಗಳನ್ನು ಕೂಗಿದರು.
ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಪಕ್ಷದ್ರೋಹ ಮಾಡಿದ್ದಾರೆಂದು ನಾಯಕರ ವಿರುದ್ದ ಆಕ್ರೋಶ. ಕಾರ್ಯಕರ್ತರ ಆಕ್ರೋಶಕ್ಕೆ ಉತ್ತರ ನೀಡಲು ನಾಯಕರು ಪರದಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.