ಬೆಂಗಳೂರು : ಉಪಚುನಾವಣೆಗೆ ಮುನ್ನವೇ ಹಳೆ ಮೈಸೂರು ಭಾಗದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಲು ಬಿಜೆಪಿ ತಂತ್ರ ರೂಪಿಸಿದ್ದು, ಆ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದೆ.
									
			
			 
 			
 
 			
			                     
							
							
			        							
								
																	
									
										
								
																	
ಹೌದು. ಉಪಚುನಾವಣೆಗೆ ಭರ್ಜರಿ ಸಿದ್ದತೆ ನಡೆಸುತ್ತಿರುವ ಬಿಜೆಪಿ ಮೈಸೂರು, ಮಂಡ್ಯ ಹಾಗೂ ರಾಮನಗರ ಜಿಲ್ಲೆಯ ಪ್ರಭಾವಿ ನಾಯಕರಿಗೆ ಗಾಳ ಹಾಕಲು ತಂತ್ರ ರೂಪಿಸಿದ್ದು, ಬಿಗ್ ಆಫರ್ ನೀಡುವುದರ ಮೂಲಕ ನಾಯಕರನ್ನು ತಮ್ಮ ಪಕ್ಷಕ್ಕೆ ಸೆಳೆಯುತ್ತಿದೆ ಎನ್ನಲಾಗಿದೆ.
									
										
								
																	
ಈಗಾಗಲೇ ಕಾಂಗ್ರೆಸ್ ನ ಪ್ರಮುಖ ನಾಯಕರನ್ನು ಸಂಪರ್ಕಿಸಿ ಸೂಕ್ತ ಸ್ಥಾನ ನೀಡುವಂತೆ ಭರವಸೆ ನೀಡಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.