Webdunia - Bharat's app for daily news and videos

Install App

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬಿಜೆಪಿ ಪ್ಲಾನ್?

Webdunia
ಮಂಗಳವಾರ, 28 ಮೇ 2019 (17:10 IST)
ಆಪರೇಷನ್ ಕಮಲ ಮಾಡಿ ಬಿಜೆಪಿಯವರು ಸರಕಾರ ರಚಿಸುತ್ತಾರೆ ಎನ್ನುವ ನಂಬಿಕೆ ನನಗಿಲ್ಲ. ಹೀಗಂತ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದು, ಹೊಸ ಬಾಂಬ್ ಸಿಡಿಸಿದ್ದಾರೆ.

ನನಗೆ ಬಂದ ಮಾಹಿತಿಯ ಪ್ರಕಾರ, ಬಿಜೆಪಿಯವರು ಅತೃಪ್ತ ಶಾಸಕರಿಂದ ರಾಜೀನಾಮೆ ಕೊಡಿಸಿ ರಾಷ್ಟ್ರಪತಿ ಆಡಳಿತ ಹೇರಲು ಮುಂದಾಗಿದ್ದಾರೆ. ಬಳಿಕ ಚುನಾವಣೆಗೆ ಹೋಗಲು ಬಿಜೆಪಿಯವರು ಸಿದ್ದತೆ ನಡೆಸಿದ್ದಾರೆ. ಲೋಕ ಸಭೆಯಲ್ಲಿ ಸಿಕ್ಕ ಗೆಲುವಿನಿಂದ, ವಿಧಾನ ಸಭೆ ಚುನಾವಣೆಗೆ ಹೋದರೆ 150 ಸ್ಥಾನಗಳನ್ನ ಸುಲಭವಾಗಿ ಗೆಲ್ಲಬಹುದು ಎನ್ನುವ ಲೆಕ್ಕ ಚಾರದಲ್ಲಿ ಬಿಜೆಪಿ ನಾಯಕರಿದ್ದಾರೆಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎಲ್ಲರು ಮಂತ್ರಿ ಆಗಬೇಕು ಎನ್ನುವವರೇ, ಇದು ಸಾದ್ಯವಿಲ್ಲ. ಜೆಡಿಎಸ್ - ಕಾಂಗ್ರೆಸ್ ನವರು ಒಗ್ಗಟ್ಟಿನಿಂದ ಸರಕಾರ ನಡೆಸಿದ್ರೆ ಒಳ್ಳೆಯದು. ಇಲ್ಲದಿದ್ದರೆ ಕಷ್ಟ. ಮೈತ್ರಿಯಲ್ಲಿ ಹೆಚ್ಚುಕಡಿಮೆ ಆಗಿದೆ.  ಭಿನ್ನಾಭಿಪ್ರಾಯ ಮರೆತು ಎಲ್ಲರು ಒಗ್ಗಟ್ಟಾಗಿದ್ದಾರೆ. ಮೈತ್ರಿಯಲ್ಲಿ ಅಪಸ್ವರ ಬಾರದಂತೆ ನೋಡಿಕೊಳ್ಳಬೇಕು. ನಾನು ಸಹ ಮಂತ್ರಿಯಾಗಿಲ್ಲ, ನಾನು ಎಲ್ಲ ತ್ಯಾಗಕ್ಕೂ ಸಿದ್ದ, ಸರಕಾರ ಒಳ್ಳೆಯ ರೀತಿಯಲ್ಲಿ ನಡೆಯಬೇಕು. ಅದಕ್ಕಾಗಿ ಉಳಿದವರು ತ್ಯಾಗಕ್ಕೆ ಮುಂದಾಗಲಿ.

ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸವಾಲಾಗಿ ಸ್ವೀಕರಿಸಿಕೊಂಡು ಗೊಂದಲಗಳನ್ನ ಬಗೆಹರಿಸಲಿ. ಕೆಲವು ಸಚಿವರು ರಾಜೀನಾಮೆಗೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆ. ಹೊಸಬರಿಗೆ ಅವಕಾಶ ಮಾಡಿಕೊಡಲಿ. ಇಂತಹ ಕ್ಲಿಷ್ಟಕರವಾದ ಸ್ಥಿತಿಯಲ್ಲಿ ಸರಕಾರ ನಡೆಯಬೇಕಾದರೆ, ಕೇಲವರು ತ್ಯಾಗ ಮಾಡಲೇಬೇಕು ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments