Webdunia - Bharat's app for daily news and videos

Install App

ಸವಲತ್ತು ನೀಡುವಲ್ಲಿ ಬಿಜೆಪಿ ರಾಜಕೀಯ: ಹರೀಶ್ ಕುಮಾರ್

Webdunia
ಗುರುವಾರ, 2 ಸೆಪ್ಟಂಬರ್ 2021 (19:33 IST)
ಸರ್ಕಾರದಿಂದ ಜನರಿಗೆ ಸಿಗಬೇಕಾದ ಸವಲತ್ತುಗಳಲ್ಲಿ ಬಿಜೆಪಿ ಪಕ್ಷದ ಸದಸ್ಯರು ರಾಜಕೀಯ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆರೋಪಿಸಿದ್ದಾರೆ.‌
ಮಂಗಳೂರಿನ ‌ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ನೀಡಲ್ಪಡುವ ಲಸಿಕೆ ಹಂಚಿಕೆ, ಗ್ರಾಮೀಣ ಪ್ರದೇಶಗಳಲ್ಲಿ ಜನಸಾಮಾನ್ಯರ ಆರೋಗ್ಯ ತಪಾಸಣೆ ಹಾಗೂ ಕಾರ್ಮಿಕ ಇಲಾಖೆಯ ಕಲ್ಯಾಣ ನಿಧಿಯಿಂದ ನೀಡಲಾಗುವ ಆಹಾರ ಪೊಟ್ಟಣಗಳನ್ನು ವಿತರಿಸುವ ಕಾರ್ಯವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡುತ್ತಿದೆ ಎಂದು ಆಪಾದಿಸಿದರು.
ಇನ್ನು ಕೆಎಸ್ ಆರ್ ಟಿಸಿ ಬಸ್ಸನ್ನು ಐಸಿಯು ಆಗಿ ಪರಿವರ್ತಿಸಿ ಗ್ರಾಮೀಣ ಭಾ
ಗದಲ್ಲಿ ಜನರ ಆರೋಗ್ಯ ತಪಾಸಣೆ ಕಾರ್ಯದಲ್ಲೂ ಇದೇ ರೀತಿ ರಾಜಕೀಯ ನಡೆಯುತ್ತಿದೆ. ಈ ಬಗ್ಗೆ ಕ್ರಮ ವಹಿಸಬೇಕಾದ ಅಧಿಕಾರಿಗಳು ಕೂಡಾ ಬಿಜೆಪಿಯ ಕೈಗೊಂಬೆಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹರೀಶ್ ಕುಮಾರ್ ಆಪಾದಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಶಾಹುಲ್ ಹಮೀದ್, ಅಬ್ಬಾಸ್, ಲಾರೆನ್ಸ್ ಡಿಸೋಜಾ, ಸುಧೀರ್ ಟಿ.ಕೆ., ನೀರಜ್ ಪಾಲ್ ಮೊದಲಾದವರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments