Select Your Language

Notifications

webdunia
webdunia
webdunia
webdunia

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರಿಂದ 10 ಕೋಟಿ ಆಮಿಷ: ಹರಿಪ್ರಸಾದ್

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರಿಂದ 10 ಕೋಟಿ ಆಮಿಷ: ಹರಿಪ್ರಸಾದ್
ಬೆಂಗಳೂರು , ಭಾನುವಾರ, 30 ಜುಲೈ 2017 (13:18 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ಶಾಸಕರಿಗೆ 10 ಕೋಟಿ ರೂ ಆಮಿಷ ಒಡ್ಡಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ.
 
ಗುಜರಾತ್‌ನಲ್ಲಿ ನಡೆಯುತ್ತಿರುವ ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲಲು ಅಮಿತ್ ಶಾ, ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಆಪರೇಶನ್ ಕಮಲ ನಡೆಸುತ್ತಿದ್ದಾರೆ. ಈಗಾಗಲೇ ಆರು ಶಾಸಕರನ್ನು ಖರೀದಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
 
ಆಪರೇಶನ್ ಕಮಲದಿಂದ ಕಾಂಗ್ರೆಸ್ ಶಾಸಕರನ್ನು ರಕ್ಷಿಸಲು ಬೆಂಗಳೂರಿಗೆ ಕರೆತರಲಾಗಿದೆ. ಇಲ್ಲಿಂದ ಕಾಂಗ್ರೆಸ್ ಶಾಸಕರು ನೇರವಾಗಿ ಗುಜರಾತ್‌ಗೆ ತೆರಳಿ ಮತದಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
 
ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಪ್ರಜಾಪ್ರಭುತ್ವದ ನಿಯಮಗಳನ್ನು ಗಾಳಿಗೆ ತೂರಿ ಕುದುರೆ ವ್ಯಾಪಾರ ನಡೆಸಲಾಗುತ್ತಿದೆ. ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಎಚ್ಚರಿಕೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್‌ವೈ ವಿರುದ್ಧ ಸಚಿವ ಡಿ.ಕೆ.ಶಿವಕುಮಾರ್ ಆಕ್ರೋಶ