Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ಕುಂಟು ನೆಪ ಹೇಳುವುದನ್ನು ನಿಲ್ಲಿಸಲಿ: ಬಿ.ಎಸ್.ಯಡಿಯೂರಪ್ಪ

ಸಿಎಂ ಸಿದ್ದರಾಮಯ್ಯ ಕುಂಟು ನೆಪ ಹೇಳುವುದನ್ನು ನಿಲ್ಲಿಸಲಿ: ಬಿ.ಎಸ್.ಯಡಿಯೂರಪ್ಪ
ಹುಬ್ಬಳ್ಳಿ , ಶನಿವಾರ, 19 ನವೆಂಬರ್ 2016 (11:17 IST)
ರಾಜ್ಯದಲ್ಲಿ ಭೀಕರ ಬರಗಾಲವಿದೆ. ಕುಡಿಯುವ ನೀರಿಗೂ ಅಭಾವವಿದೆ. ರೈತರ ಸಮಸ್ಯೆ ಕುರಿತು ಚರ್ಚಿಸಲು ಅಧಿವೇಶನದಲ್ಲಿ ಅವಕಾಶ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಂಟು ನೆಪ ಹೇಳುವುದನ್ನು ನಿಲ್ಲಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಭೀಕರ ಬರಗಾಲದಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಕುರಿತು ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು. ಸಹಕಾರಿ ಬ್ಯಾಂಕ್‌ಗಳ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
 
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ಯಾರು ಏನೇ ಟೀಕಿಸಿದರು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಎಚ್‌ಡಿಕೆ ದೊಡ್ಡ ಮನುಷ್ಯರಪ್ಪಾ ಎಂದು ವ್ಯಂಗ್ಯವಾಗಿ ನುಡಿದರು.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸೀಟುಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕರಿಗೆ ಸ್ಪಂಧಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನೋಟ್ ಬ್ಯಾನ್‌ನಿಂದ ಸ್ವಚ್ಛ ಭಾರತದ ಬದಲಾಗಿ ಸ್ವಚ್ಛ ಬಿಜೆಪಿ: ಐವಾನ್ ಡಿಸೋಜಾ