Daily Horoscope

Select Your Language

Notifications

webdunia
webdunia
webdunia
webdunia

ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ರಾಜ್ಯ ಭೇಟಿ ಹಿಂದಿದೆಯಾ ಈ ಲೆಕ್ಕಚಾರ

Nitin Nabin Karnataka Visit
Photo Credit X
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಶನಿವಾರ ಸಂಜೆಯಿಂದ ಮೂರು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ರಾಜಕೀಯ ವಲಯಗಳಲ್ಲಿ ಭಾರೀ ಕುತೂಹಲವನ್ನು ಮೂಡಿಸಿದೆ. ಇದು ಕರ್ನಾಟಕದಲ್ಲಿ ಎದುರಿಸಲಿರುವ 2028 ರ ವಿಧಾನಸಭಾ ಚುನಾವಣೆಯ ಒಂದು ಭಾಗವಾಗಿದೆ ಎಂದು ಹೇಳಲಾಗುತ್ತಿದೆ. 

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷ ಭರ್ಜರಿ ಗೆಲುವಿನ ನಂತರ ಅವರು ಭೇಟಿ ನೀಡುತ್ತಿರುವುದರಿಂದ ಇದು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತದೆ. ಅವರು ಇಂದು ಪಕ್ಷದ ಎಸ್‌ಐಆರ್ ವಿಭಾಗದೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಪಕ್ಷದ ಕಚೇರಿಯಲ್ಲಿ ಶಾಸಕರು ಮತ್ತು ಸಂಸದರು ಸೇರಿದಂತೆ ಪಕ್ಷದ ಮುಖಂಡರೊಂದಿಗೆ ಸರಣಿ ಸಭೆಗಳಲ್ಲಿ ತೊಡಗಿರುವ ಅವರು ನಗರದ ಹೊರವಲಯದಲ್ಲಿರುವ ರೆಸಾರ್ಟ್‌ನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸೋಮವಾರ, ನಬಿನ್ ಅವರು ತಮ್ಮ ಪ್ರವಾಸವನ್ನು ಮುಗಿಸುವ ಮೊದಲು ಪಕ್ಷದ ಪ್ರಮುಖ ನಾಯಕರು ಮತ್ತು ಆರೆಸ್ಸೆಸ್ ಪದಾಧಿಕಾರಿಗಳನ್ನು ಭೇಟಿ ಮಾಡುವ ಸಾಧ್ಯತೆಯಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಈ ದಿನದವರೆಗೆ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿದ ಮಳೆ, ಇಲ್ಲಿದೆ ಡಿಟೇಲ್ಸ್‌