Daily Horoscope

Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

Karnataka BJP protest
ಬೆಂಗಳೂರು: ಬಿಜೆಪಿ ಶಾಸಕರ ಮೇಲೆ ನಿನ್ನೆ ನಡೆದ ಹಲ್ಲೆಯನ್ನು ಖಂಡಿಸಿ ಇಂದು ಪಕ್ಷದ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕೆಪಿಸಿಸಿ ಕಚೇರಿ ಬಳಿ ಪ್ರತಿಭಟನೆಗೆ ಮುಂದಾಗಿದ್ದ ಕೊತ್ವಾಲ್ ರಾಮಚಂದ್ರನ ಶಿಷ್ಯರಾದ ಕಾಂಗ್ರೆಸ್ಸಿಗರು ನಮ್ಮ ಪಕ್ಷದ ಶಾಸಕರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಮುಖಂಡರು ಖಂಡಿಸಿದರು. ನಿನ್ನೆ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾಗ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಭಾರೀ ಕಿತ್ತಾಟ ನಡೆದಿದೆ. ಇದಾದ ಬಳಿಕ ಬಿಜೆಪಿ ನಾಯಕ ಆರ್ ಅಶೋಕ್ ನಿನ್ನೆ ರಾತ್ರಿ 10 ಗಂಟೆಯವರೆಗೆ ಡೆಡ್ ಲೈನ್ ನೀಡುತ್ತೇವೆ, ಹಲ್ಲೆಕೋರರನ್ನು ಬಂಧಿಸದೇ ಇದ್ದರೆ ಪ್ರತಿಭಟನೆ ಮಾಡುವುದಾಗಿ ಹೇಳಿದ್ದರು. ಇತ್ತ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಕೂಡಾ ನಮ್ಮ ಪಕ್ಷದ ಕಚೇರಿಯ ಮೇಲೆ ದಾಳಿ ಮಾಡಲು ಬಂದಾಗ ಪ್ರತಿದಾಳಿ ಮಾಡದೇ ಏನು ಮಾಡಬೇಕಿತ್ತು ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಬಿಜೆಪಿಯವರೇ ಮಚ್ಚು, ಲಾಂಗ್ ತೆಗೆದುಕೊಂಡು ಬಂದಿದ್ದರು ಎಂದು ಆರೋಪಿಸಿದ್ದರು.

ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಈ ಸಂಬಂಧ ಪ್ರತಿಭಟನೆ ಮತ್ತು ಧರಣಿ ನಡೆಯಿತು. ಕೊತ್ವಾಲ್ ರಾಮಚಂದ್ರನ ಗೂಂಡಾ ಸಂಸ್ಕತಿಯನ್ನು ಬಿತ್ತುವ ಕೆಲಸವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಲಾಯಿತು.

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು