Select Your Language

Notifications

webdunia
webdunia
webdunia
webdunia

ಕಪ್ಪ ಕಾಣಿಕೆ: ಬಿಜೆಪಿಯಿಂದ ಸಚಿವ ಎಂ.ಬಿ. ಪಾಟೀಲ್ ನಿವಾಸದ ಮುಂದೆ ಪ್ರತಿಭಟನೆ

ಕಪ್ಪ ಕಾಣಿಕೆ: ಬಿಜೆಪಿಯಿಂದ ಸಚಿವ ಎಂ.ಬಿ. ಪಾಟೀಲ್ ನಿವಾಸದ ಮುಂದೆ ಪ್ರತಿಭಟನೆ
ವಿಜಯಪುರ , ಶುಕ್ರವಾರ, 24 ಫೆಬ್ರವರಿ 2017 (18:17 IST)
ಕಾಂಗ್ರೆಸ್ ಹೈಕಮಾಂಡ್‌ಗೆ ಕಪ್ಪ ಸಲ್ಲಿಸಲಾಗಿದೆ ಎನ್ನುವ ಡೈರಿಯಲ್ಲಿ ಸಚಿವ ಎಂ.ಬಿ.ಪಾಟೀಲ್ ಹೆಸರು ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
 
ಡೈರಿಯಲ್ಲಿ ಸಚಿವ ಪಾಟೀಲ್ ಹೆಸರು ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.
 
ಸಚಿವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ನಿರಂತರವಾಗಿ ಹೋರಾಟ ಮುಂದುವರಿಸುತ್ತಿವೆ ಎಂದು ಬಿಜೆಪಿ ಜಿಲ್ಲಾ ಘಟಕ ಎಚ್ಚರಿಕೆ ನೀಡಿದೆ.
 
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಮಧ್ಯಪ್ರವೇಶಿಸಿದ ಪೊಲೀಸರು, ಬಿಜೆಪಿ ಕಾರ್ಯಕರ್ತರನ್ನು ಬಂಧನಕ್ಕೊಳಪಡಿಸಿದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಫೆ.28ರಂದು ದೇಶವ್ಯಾಪಿ ಬ್ಯಾಂಕ್ ಮುಷ್ಕರ