Publish Date: Fri, 18 Aug 2017 (21:03 IST)
Updated Date: Fri, 18 Aug 2017 (21:07 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಲಹೆಯಂತೆ ಸಿಎಂ ಸಿದ್ದರಾಮಯ್ಯ ಸರಕಾರದ ವಿರುದ್ಧ ನಿರಂತರ ಹೋರಾಟ ಮುಂದುವರಿಸಲಾಗುವುದು ಎಂದು ಬಿಜೆಪಿ ಮುಖಂಡ ಅರವಿಂದ್ ಲಿಂಬಾವಳಿ ಹೇಳಿದ್ದಾರೆ.
ಇಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಆಗಸ್ಟ್ 22 ರಂದು ಯುವಮೋರ್ಚಾದಿಂದ ಪಂಜಿನ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಎರಡನೇ ಬಾರಿಗೆ ವಿಸ್ತಾರಕ್ ಯೋಜನೆ ಮುಂದುವರಿಸಲು ಕೂಡಾ ತೀರ್ಮಾನಿಸಲಾಗಿದೆ ಎಂದು ಸಭೆಯ ನಂತರ ಮಾಹಿತಿ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಭ್ರಷ್ಟ ಸಚಿವರಾದ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲದು ಎಂದು ಬಿಜೆಪಿ ಮುಖಂಡ ಅರವಿಂದ್ ಲಿಂಬಾವಳಿ ಘೋಷಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.