Daily Horoscope
✕

ಬಿ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಕೃಷ್ಣವೇಣಿ ಕೆ
ಬುಧವಾರ, 12 ಆಗಸ್ಟ್ 2026 (17:53 IST)
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುದೊಡ್ಡ ಹಗರಣದ ಸಂಬಂಧ ನಾಗೇಂದ್ರರ ರಾಜೀನಾಮೆ ಪಡೆಯುವಂತೆ ಬಿಜೆಪಿ ಯುವ ಮೋರ್ಚಾ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಜಗದೀಶ್ ಆರ್. ಚಂದ್ರ ಅವರು ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ.

ಬಿಜೆಪಿ ಬೆಂಗಳೂರು ಮಹಾನಗರ ಯುವ ಮೋರ್ಚಾ ವತಿಯಿಂದ ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಗರಣ ಸಂಬಂಧ ಕೇಸ್ ಈಗಲೂ ನಡೆಯುತ್ತಿದೆ. ಹಿಂದೆ ಅವರು ರಾಜೀನಾಮೆ ನೀಡಿದ್ದರು. ಮತ್ತೊಮ್ಮೆ ಅವರಿಗೆ ಅವಕಾಶ ನೀಡಿದ್ದು ಸರಿಯಲ್ಲ ಎಂದು ತಿಳಿಸಿದರು. ಅವರು ರಾಜೀನಾಮೆ ಕೊಡದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜು ಅವರ ನೇತೃತ್ವದಲ್ಲಿ ಬೃಹತ್ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು. 
ಕಾಂಗ್ರೆಸ್ ಸರಕಾರ ರೈತರು, ವಿದ್ಯಾರ್ಥಿಗಳು, ಮಹಿಳಾ ಪರವಾಗಿ ಇಲ್ಲ ಎಂದು ಅವರು ಆಕ್ಷೇಪಿಸಿದರು. ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ಒಬ್ಬ ಮಹಿಳೆಗೂ ಸಚಿವ ಸ್ಥಾನ ನೀಡಿಲ್ಲ ಎಂದು ಟೀಕಿಸಿದರು. ಇವರಿಗೆ ಮಹಿಳೆಯರ ಮತ ಮಾತ್ರ ಬೇಕೇ? ಇದು ಯಾವ ನ್ಯಾಯ ಎಂದು ಕೇಳಿದರು.

ಧಾರವಾಡದಲ್ಲಿ ವಿದ್ಯಾರ್ಥಿ ಪ್ರತಿಭಟನೆ ನಡೆದರೆ ಯಾರೂ ಅವರ ಬಳಿ ತೆರಳುವುದಿಲ್ಲ; ದೆಹಲಿಗೆ ಮಾತ್ರ ಮುಖ್ಯಮಂತ್ರಿಗಳು ಓಡಿ ಹೋಗುತ್ತಾರೆ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು. ಇದು ಹೈಕಮಾಂಡ್ ಹೇಳಿದಂತೆ ಕೇಳುವ ಕಾಂಗ್ರೆಸ್ ಸರಕಾರ ಎಂದು ಟೀಕಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ನಕಲಿ ಸಿಡಿ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದು ಸಿಸಿಬಿ ತೀವ್ರ ವಿಚಾರಣೆ

Karnataka Weather: ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

ಮುಂದಿನ ಸುದ್ದಿ
Show comments