Publish Date: Fri, 18 Aug 2017 (11:28 IST)
Updated Date: Fri, 18 Aug 2017 (11:33 IST)
ಬೆಂಗಳೂರು: ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಂದು ಹೋದ ಮೇಲೆ ರಾಜ್ಯ ಬಿಜೆಪಿಗೆ ಚುರುಕು ಮುಟ್ಟಿದೆ. ಕಾಂಗ್ರೆಸ್ ನ ಭ್ರಷ್ಟ ಸಚಿವರನ್ನು ವಜಾಗೊಳಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಂಡಿರುವ ಬಿಜೆಪಿ ಪ್ರೀಡಂ ಪಾರ್ಕ್ ನಲ್ಲಿ ಒಟ್ಟುಸೇರಿದೆ.
ಪ್ರತಿಭಟನೆಯಲ್ಲಿ ಬಿಜೆಪಿಯ ಶಾಸಕರು, ಕಾರ್ಪೋರೇಟರ್ ಗಳು ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದಾರೆ. ಬಿಎಸ್ ಯಡಿಯೂರಪ್ಪ, ಆರ್ ಅಶೋಕ್, ಸಿಟಿ ರವಿ ಸೇರಿದಂತೆ ಘಟಟಾನುಘಟಿ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಇದಾದ ಬಳಿಕ ಫ್ರೀಡಂ ಪಾರ್ಕ್ ನಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.