Webdunia - Bharat's app for daily news and videos

Install App

ಸಚಿವ ಸೇಠ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಸಿಎಂ ಕಾರಿಗೆ ಮುತ್ತಿಗೆ

Webdunia
ಶುಕ್ರವಾರ, 11 ನವೆಂಬರ್ 2016 (18:56 IST)
ಟಿಪ್ಪು ಜಯಂತಿ ದಿನಾಚರಣೆಯಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್ ಅರೆನಗ್ನ ಚಿತ್ರಗಳ ವೀಕ್ಷಣೆ ಮಾಡಿದ್ದಾರೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಿದ್ದಾರೆ.
 
ರೈತರ ಹೊಲದಿಂದ ತಮ್ಮ ಕಾರಿನತ್ತ ಸಿಎಂ ಸಿದ್ದರಾಮಯ್ಯ ಬರುತ್ತಿರುವಾಗ ಬಿಜೆಪಿ ಕಾರ್ಯಕರ್ತರು ಅವರಿಗೆ ಮುತ್ತಿಗೆ ಹಾಕಿ ಸಚಿವ ತನ್ವೀರ್ ಸೇಠ್ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
 
ಸಚಿವ ತನ್ವೀರ್ ಸೇಠ್ ಅವರ ರಾಜೀನಾಮೆ ಪಡೆಯುವವರೆಗೆ ಹೋರಾಟ ನಿಲ್ಲದು ಎಂದು ಎಚ್ಚರಿಸಿದ ಪ್ರತಿಭಟನಾಕಾರರು, ತನ್ವೀರ್ ಸೇಠ್ ತಮ್ಮ ಜವಾಬ್ದಾರಿಯನ್ನು ಅರಿತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಗುಡುಗಿದರು.
 
ಬರಪರಿಶೀಲನೆ ಕಾರ್ಯಕ್ರಮಕ್ಕಾಗಿ ನಗರಕ್ಕೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ, ರೈತರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಸರಕಾರದಿಂದ ಆದಷ್ಟು ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments