Publish Date: Sun, 20 Aug 2017 (11:50 IST)
Updated Date: Sun, 20 Aug 2017 (11:54 IST)
ರಾಜ್ಯ ಸರ್ಕಾರ ಅಧಿಕಾರದ ಬಲದಿಂದ ಭ್ರಷ್ಟಾಚಾರ ನಿಗ್ರಹ ದಳ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.
ನಗರದ ಮೈಸೂರು ಬ್ಯಾಂಕ್ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಮುಖಂಡರಾದ ಆರ್.ಅಶೋಕ್. ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಮೇಲೆ ಎಸಿಬಿ ಅಧಿಕಾರಿಗಳು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸುಳ್ಳು ಸಾಕ್ಷ್ಯ ಹೇಳುವಂತೆ ಒತ್ತಡ ಹೇರಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಬಿಜೆಪಿ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ. ಯಡಿಯೂರಪ್ಪರನ್ನು ಕೇಸ್‌ಗಳಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿದೆ. ಆದರೆ, ಇಂತಹ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ಬಿಜೆಪಿ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.