Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರದ ವಿರುದ್ಧ BJP ಪ್ರತಿಭಟನೆ

Webdunia
ಸೋಮವಾರ, 5 ಜೂನ್ 2023 (18:25 IST)
ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸೀಟುಗಳನ್ನ ಪಡೆದು ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾರಕ್ಕೇರಿದ್ದು, ಇದೀಗ ಸಿದ್ದರಾಮಯ್ಯನವರ ಸರ್ಕಾರದ ವಿರುದ್ಧ ಮೊದಲ ಪ್ರತಿಭಟನೆಗೆ ರಾಜ್ಯ BJP ಕರೆ ನೀಡಿದೆ. ಕರ್ನಾಟಕ ಸರ್ಕಾರದ ಮೂರು ಜನ ವಿರೋಧಿ ನಿರ್ಧಾರಗಳನ್ನು ವಾಪಸ್‌ ಪಡೆಯಲು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ಮತ್ತು ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ತಿಳಿಸಿದ್ದಾರೆ. 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಎಂದಿದ್ದ ಕಾಂಗ್ರೆಸ್‌ ಪಕ್ಷ ಈಗ ಷರತ್ತು ವಿಧಿಸಿರುವುದು, ವಿದ್ಯುತ್‌ ಶುಲ್ಕ ಹೆಚ್ಚಿಸಿರುವುದು ಹಾಗೂ ಹಾಲಿನ ಪ್ರೋತ್ಸಾಹ ಧನ ಕಡಮೆಗೊಳಿಸುವ ನಿರ್ಧಾರಗಳನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿ ಈ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ. ಈ ಮುಂಚೆ ಮನೆಗಳಲ್ಲಿ ಪ್ರತಿ ತಿಂಗಳು 70 ಯುನಿಟ್‌ ವಿದ್ಯುತ್‌ ಬಳಸುತ್ತಿದ್ದರೆ 80 ಯುನಿಟ್‌ ಬಳಸಿ. ಆದರೆ, ಯಾವುದೇ ಕಾರಣಕ್ಕೂ 80 ಯೂನಿಟ್‌ ಮೀರುವಂತಿಲ್ಲ ಎಂಬ ಷರತ್ತು ಅಥವಾ ನಿಬಂಧನೆಯನ್ನು ಸರ್ಕಾರ ಹಾಕಿದೆ. ಹಾಗಿದ್ದರೆ ಈ ಹಿಂದೆ 200 ಯುನಿಟ್‌ ಎಂದಿದ್ದೀರಲ್ಲವೇ? ಆ ಮಾತನ್ನು ನಡೆಸಿ ಕೊಡದೆ ಮಾತು ತಪ್ಪಿದವರು ಅಥವಾ ವಚನಭ್ರಷ್ಟತೆ ಆದಂತಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments