Select Your Language

Notifications

webdunia
webdunia
webdunia
webdunia

18 ಶಾಸಕರ ಅಮಾನತು ವಾಪಾಸ್ ಪಡೆಯುವಂತೆ ಬಿಜೆಪಿ ಪ್ರತಿಭಟನೆ

Karnataka BJP Protests, 18 BJP MLA Suspension, Speaker UT Khadar

Sampriya

ಬೆಂಗಳೂರು , ಬುಧವಾರ, 2 ಏಪ್ರಿಲ್ 2025 (16:29 IST)
Photo Courtesy X
ಬೆಂಗಳೂರು: ತಮ್ಮ ಪಕ್ಷದ 18 ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್‌ ವಿರುದ್ಧ ಮತ್ತು ಅಮಾನತನ್ನು ವಾಪಸ್‌ ಪಡೆಯುವಂತೆ ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.

ವಿಧಾನಸೌಧದಲ್ಲಿ ಸ್ಪೀಕರ್‌ ಪೀಠಕ್ಕೆ ಅಗೌರವ ತಂದಿದ ಆರೋಪದಲ್ಲಿ ಬಿಜೆಪಿಯ 18 ಶಾಸಕರನ್ನು 6 ತಿಂಗಳು ಯುಟಿ ಖಾದರ್ ಅವರು ಅಮಾನತು ಮಾಡಿದ್ದರು.

ಇದೀಗ ಈ ವಿಚಾರವಾಗಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ, ಅಮಾನತು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.  ಈ ಕೂಡಲೇ ಅಮಾನತ್ತನ್ನು ರದ್ದುಗೊಳಿಸಿ ಶಾಸಕತ್ವವನ್ನು ಮರುಸ್ಥಾಪಿಸಲು ಒತ್ತಾಯಿಸಿ ಜಂಟಿ ಕಾರ್ಯದರ್ಶಿಗಳ ಮೂಲಕ ವಿಧಾನಸಭಾ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ, ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರುಗಳು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿ ಹತ್ಯೆ ಮಾಡಿ ಸೂಟ್ ಕೇಸ್ ನಲ್ಲಿ ತುಂಬಿದ್ದ ಪತಿ ಕೇಸ್: ಆತ ನೀಡಿದ ಕಾರಣ ಕೇಳಿದ್ರೆ ಶಾಕ್