Webdunia - Bharat's app for daily news and videos

Install App

18 ಶಾಸಕರ ಅಮಾನತು ವಾಪಾಸ್ ಪಡೆಯುವಂತೆ ಬಿಜೆಪಿ ಪ್ರತಿಭಟನೆ

Sampriya
ಬುಧವಾರ, 2 ಏಪ್ರಿಲ್ 2025 (16:29 IST)
Photo Courtesy X
ಬೆಂಗಳೂರು: ತಮ್ಮ ಪಕ್ಷದ 18 ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್‌ ವಿರುದ್ಧ ಮತ್ತು ಅಮಾನತನ್ನು ವಾಪಸ್‌ ಪಡೆಯುವಂತೆ ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.

ವಿಧಾನಸೌಧದಲ್ಲಿ ಸ್ಪೀಕರ್‌ ಪೀಠಕ್ಕೆ ಅಗೌರವ ತಂದಿದ ಆರೋಪದಲ್ಲಿ ಬಿಜೆಪಿಯ 18 ಶಾಸಕರನ್ನು 6 ತಿಂಗಳು ಯುಟಿ ಖಾದರ್ ಅವರು ಅಮಾನತು ಮಾಡಿದ್ದರು.

ಇದೀಗ ಈ ವಿಚಾರವಾಗಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ, ಅಮಾನತು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.  ಈ ಕೂಡಲೇ ಅಮಾನತ್ತನ್ನು ರದ್ದುಗೊಳಿಸಿ ಶಾಸಕತ್ವವನ್ನು ಮರುಸ್ಥಾಪಿಸಲು ಒತ್ತಾಯಿಸಿ ಜಂಟಿ ಕಾರ್ಯದರ್ಶಿಗಳ ಮೂಲಕ ವಿಧಾನಸಭಾ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ, ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರುಗಳು ಉಪಸ್ಥಿತರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments