ಬಿಬಿಎಂಪಿ ಅಡಳಿತ ಪಕ್ಷದ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಆರಂಭಿಸಿದೆ.
 
									
										
								
																	
	ಮಾಜಿ ಡಿಸಿಎಂ ಆರ್ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ, ಬಿಬಿಎಂಪಿಯ ಅಡಳಿತ ಪಕ್ಷ ರಸ್ತೆಗಳಲ್ಲಿ ಗುಂಡಿಗಳ ಸಾಧನೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
									
			
			 
 			
 
 			
					
			        							
								
																	
	 
	ಕಾಂಗ್ರೆಸ್ ಪಕ್ಷ 40 ವರ್ಷಗಳ ಅವಧಿಯವರಿಗೆ ಬಿಬಿಎಂಪಿಯಲ್ಲಿ ಅಡಳಿತ ಮಾಡಿದೆ. ಆದಾಗ್ಯೂ ಬೆಂಗಳೂರಿನ ಜನತೆಗೆ ಉತ್ತಮ ಮೂಲಸೌಕರ್ಯ ಒದಗಿಸಿಲ್ಲ. ಮಳೆಗಾಲದಲ್ಲಿ ಹಾವು ಚೇಳುಗಳು ಮನೆಯೊಳಗೆ ನುಗ್ಗುತ್ತಿವೆ. ಬಿಬಿಎಂಪಿ ಕಾರ್ಯನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.
 
									
										
								
																	
	 
	ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಅನೇಕ ಬಡಾವಣೆಗಳು ದ್ವೀಪಗಳಂತಾಗಿವೆ. ನೀರು ಮನೆಗೆ ನುಗ್ಗಿದ್ದರಿಂದ ಸಾಮಾನ್ಯ ಜನತೆ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಬಿಜೆಪಿ ಮುಖಂಡರು ಪ್ರತಿಭಟನೆಯಲ್ಲಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
									
											
							                     
							
							
			        							
								
																	
	
	ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.