Publish Date: Mon, 22 Jan 2018 (11:26 IST)
Updated Date: Mon, 22 Jan 2018 (11:28 IST)
ಮೈಸೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ನಾಯಕರ ಶಕ್ತಿ ಪ್ರದರ್ಶನ ಜೋರಾಗುತ್ತಿದೆ. ಇದೀಗ ಬಿಜೆಪಿ ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಮೈಸೂರಿನಲ್ಲಿ ಇಂದು ಬಿಜೆಪಿ ಪರಿವರ್ತನಾ ಯಾತ್ರೆ ಹಮ್ಮಿಕೊಂಡಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡಾ ಪಾಲ್ಗೊಳ್ಳಲಿದ್ದಾರೆ.
ಬಿಜೆಪಿ ಪಕ್ಷದ ಘಟಾನುಘಟಿ ನಾಯಕರೂ ಇಂದಿನ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿಎಂ ತವರಿನಲ್ಲಿ ಉಪಚುನಾವಣೆಯಲ್ಲಿ ಸೋತಿರುವ ಬಿಜೆಪಿ ಈ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನ ಪಡಲಿದೆ. ಹಾಗೆಯೇ ಇದು ಪ್ರತಿಷ್ಠೆಯ ಕಣವೂ ಆಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ