Publish Date: Wed, 31 Jan 2018 (14:05 IST)
Updated Date: Wed, 31 Jan 2018 (14:15 IST)
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಜೊತೆ ಓವೈಸಿ ಪಕ್ಷದ ಹೊಂದಾಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಬುಧವಾರ (ಇಂದು) ಆಹಾರ ಸಚಿವ ಯು.ಟಿ.ಖಾದರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
‘ಬಿಜೆಪಿಯವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡ್ತಾರೆ. ಕಾಂಗ್ರೆಸ್ ಯಾವತ್ತು ಈ ರೀತಿ ಅಡ್ಡದಾರಿ ಹಿಡಿಯುವುದಿಲ್ಲ. ಕಳೆದ ಬಾರಿ ರಮನಾಥ ರೈ, ನನ್ನನ್ನು ಸೋಲಿಸಲು ಯತ್ನಿಸಿದ್ರು. ಕೆಲ ಸಂಘಟನೆಗಳ ಜೊತೆ ಬಿಜೆಪಿಯವರು ರಹಸ್ಯ ಹೊಂದಾಣಿ ಮಾಡಿಕೊಳ್ಳುತ್ತಿದ್ದಾರೆ. ಮುಂದಿನ ಚುನಾವಣೆಗೂ ಅದನ್ನೇ ಮಾಡ್ತಾರೆ ಅನ್ನಿಸುತ್ತೆ’ ಎಂದು ಆಹಾರ ಸಚಿವ ಯು.ಟಿ.ಖಾದರ್ ಅವರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ