ಕುಸಿದು ಬಿದ್ದ ಬಿಜೆಪಿ ಬಂಡಾಯ ಅಭ್ಯರ್ಥಿ

Webdunia
ಸೋಮವಾರ, 23 ಏಪ್ರಿಲ್ 2018 (19:02 IST)
ಕಲಘಟಗಿ ಬಿಜೆಪಿ ಬಂಡಾಯ ಅಭ್ಯರ್ಥಿ ಸಿ.ಎಂ‌.ನಿಂಬಣ್ಣವರ್ ನಾಮಪತ್ರ ಸಲ್ಲಿಸಲು ತೆರಳುವಾಗ ಕುಸಿದು ಬಿದ್ದ ಘಟನೆ ಕಲಘಟಗಿ ತಹಶೀಲ್ದಾರರ ಕಛೇರಿ ಬಳಿ ನಡೆದಿದೆ. 
ಕಲಘಟಗಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇವರ ಕೈತಪ್ಪಿ ಟಿಕೆಟ್ ಮಹೇಶ ಟೆಂಗಿನಕಾಯಿಯವರ ಪಾಲಾಗಿತ್ತು. ಇದರಿಂದ ಹಲವು ಬಾರಿ ಪ್ರತಿಭಟನೆ ನಡೆಸಿದ ಬೆಂಬಲಿಗರು ನಿಂಬಣ್ಣವರ್ ಅವರನ್ನು ಬಂಡಾಯವಾಗಿ ಸ್ಪರ್ಧೆ ಮಾಡಬೇಕು ಎಂದು ಒತ್ತಾಯಿಸಿದ್ದರು.
 
ಬೆಂಬಲಿಗರ ಒತ್ತಾಯಕ್ಕೆ ಮಣಿದ ನಿಂಬಣ್ಣವರ್  ಕಲಘಟಗಿ ಪಟ್ಟಣದ ಪ್ರಮುಖ ರಸ್ತೆ ಮೂಲಕ ಮೆರವಣಿಗೆಯಲ್ಲಿ ತೆರಳಿ ತಹಶೀಲ್ದಾರ್‌‌ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದರು. ನಾಮಪತ್ರ ಸಲ್ಲಿಕೆ ಮಾಡಲು ಹೊರಟ ಚಕ್ಕಡಿಯಲ್ಲಿಯೇ‌ ಕುಸಿದು ಬಿದ್ದರು. 
 
ಇದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.‌ ಕೂಡಲೇ ಬೆಂಬಲಿಗರು ಪ್ರಥಮ ಚಿಕಿತ್ಸೆ ನೀಡಿದರು. ಘಟನೆಗೆ ಲೋ ಬಿಪಿ ಕಾರಣ ಎನ್ನಲಾಗಿದೆ‌. ಬಳಿಕ ಹತ್ತಿರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಾಮಪತ್ರ ಸಲ್ಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡಿಗರ ರಕ್ಷಣೆಗೆ ಕೇಂದ್ರದ ಜೊತೆ ಮಾತುಕತೆ: ವಿಜಯೇಂದ್ರ

ತನ್ನ ಮಗ ಗೆಲ್ಲಲಿಲ್ಲ ಎಂದು ಪ್ರಜ್ವಲ್ ಅರೆಸ್ಟ್ ಆಗುವಂತೆ ಮಾಡಿದ್ದೇ ಕುಮಾರಸ್ವಾಮಿ: ಕದಲೂರು ಉದಯ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಇಸ್ಲಾಂಗಾಗಿ, ಖಮೇನಿ ಸಾಬ್ ಗಾಗಿ ನನ್ನ ಮಕ್ಕಳನ್ನೂ ಯುದ್ಧಕ್ಕೆ ಕಳುಹಿಸುವೆ: ದೆಹಲಿ ಮಹಿಳೆ ಕಣ್ಣೀರು Video

ಮುಂದಿನ ಸುದ್ದಿ
Show comments