Publish Date: Mon, 01 May 2023 (18:12 IST)
Updated Date: Mon, 01 May 2023 (18:18 IST)
ಬೆಂಗಳೂರಿನಲ್ಲಿ ಬಿಜೆಪಿ ವಿಧಾನಸಭಾ ಚುನಾವಣೆಗಾಗಿ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದೆ.. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನೇತೃತ್ವದಲ್ಲಿ ಪ್ರಣಾಳಿಕೆ ಬಿಡುಗಡೆಯಾಗಿದ್ದು, ಭರಪೂರ ಭರವಸೆಗಳನ್ನು ನೀಡಲಾಗಿದೆ.. ಬಿಪಿಎಲ್ ಕುಟುಂಬಕ್ಕೆ ಒಂದು ವರ್ಷಕ್ಕೆ ಉಚಿತವಾಗಿ 3 ಸಿಲಿಂಡರ್ ವಿತರಣೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.. ಕಡಿಮೆ ಬೆಲೆಯಲ್ಲಿ ಗುಣಮಟ್ಟಣದ ಆಹಾರ ವಸ್ತುಗಳ ಮಾರಾಟ ಮಾಡಲಾಗುವುದು ಎಂದು ಭರವಸೆ ನೀಡಲಾಗಿದೆ.. ಬಿಪಿಎಲ್ ಕುಟುಂಬಕ್ಕೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು, ಪ್ರತಿ ತಿಂಗಳು 5 ಕೆಜಿ ಅಕ್ಕಿ, ಸಿರಿಧಾನ್ಯ ಒಳಗೊಂಡ ಪಡಿತರ ಕಿಟ್, ಪೋಷಣೆ ಯೋಜನೆಯಡಿ ಹಾಲು, ಪಡಿತರ ಕಿಟ್ ವಿತರಣೆ, ತೀರ್ಥಕ್ಷೇತ್ರಗಳಿಗೆ ತೆರಳುವ ಬಡ ಕುಟುಂಬಗಳಿಗೆ ಒಂದು ಬಾರಿ 25 ಸಾವಿರ ರೂಪಾಯಿ ನೀಡಲಾಗುವುದು ಎಂದು ತಿಳಿಸಿದೆ.. ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಡಾ.ಸುಧಾಕರ್, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತಿತರ ನಾಯಕರು ಉಪಸ್ಥಿತರಿದ್ದರು.