Webdunia - Bharat's app for daily news and videos

Install App

ಪಾಕ್ ಪರ ಘೋಷಣೆ ಮಾಡಿದ ವ್ಯಕ್ತಿಯ ಗುರುತು ನೀಡಿದ ಬಿಜೆಪಿ

Krishnaveni K
ಬುಧವಾರ, 28 ಫೆಬ್ರವರಿ 2024 (15:42 IST)
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಕಾಂಗ್ರೆಸ್ ರಾಜ್ಯಸಭಾ ಸದಸ್ಯರ ಸೈಯದ್ ನಸೀರ್ ಹುಸೇನ್ ಬೆಂಬಲಿಗ ಯಾರು ಎಂಬುದನ್ನು ಬಿಜೆಪಿ ಗುರುತು ನೀಡಿದೆ.

ಘಟನೆ ಖಂಡಿಸಿ ಇಂದು ಬಿಜೆಪಿ ಸದನದ ಹೊರಗೆ ಮತ್ತು ಒಳಗೆ ಭಾರೀ ಪ್ರತಿಭಟನೆ ನಡೆಸಿದೆ. ಅತ್ತ ಸಿಎಂ ಸಿದ್ದರಾಮಯ್ಯ ತಪ್ಪು ಸಾಬೀತಾದರೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ವೇಳೆ ತನಿಖಾ ತಂಡ ವಿಡಿಯೋ ಕ್ಲಿಪ್ ನ ಸತ್ಯಾಸತ್ಯತೆ ಪರಿಶೀಲಿಸಲು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

ಇದೀಗ ಬಿಜೆಪಿ ಘೋಷಣೆ ಕೂಗಿದ ವ್ಯಕ್ತಿಯ ಹೆಸರು ಮತ್ತು ಹಿನ್ನಲೆ ಬಹಿರಂಗಪಡಿಸಿದೆ. ಈತ ಬ್ಯಾಡಗಿಯಲ್ಲಿ ಮೆಣಸಿನಕಾಯಿ ವ್ಯಾಪಾರ ಮಾಡುತ್ತಿರುವ ಮಹಮದ್ ಶಾಫಿ ನಾಸೀಪುಡಿ ಎಂದು ಬಿಜೆಪಿ ಬಹಿರಂಗಪಡಿಸದೆ. ಈತನ ಬಗ್ಗೆ ತನಿಖೆ ನಡೆಸಬೇಕು ಎಂದು ಬ್ಯಾಡಗಿ ಬಿಜೆಪಿ ನಾಯಕರು ಪೊಲೀಸರಿಗೆ ಆಗ್ರಹಿಸಿದ್ದಾರೆ.

ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ವೇಳೆ ಸಂಸದ ಸೈಯದ್ ಹುಸೇನ್ ಬೆಂಬಲಿಗರೊಬ್ಬರು ವಿಧಾನಸೌಧದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ: ಸತೀಶ್ ಸೈಲ್‌ 2 ದಿನ ಇಡಿ ಕಸ್ಟಡಿಗೆ

ನೇಪಾಳದಲ್ಲಿ ಸಿಲುಕಿದ ಕನ್ನಡಿಗರೆಲ್ಲರೂ ಸುರಕ್ಷಿತರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Nepal Violence: ಮೃತರ ಸಂಖ್ಯೆ 25ಕ್ಕೆ ಏರಿಕೆ, ಎಲ್ಲ ವಿಮಾನ ನಿಲ್ದಾಣ ಬಂದ್‌

ಅಶ್ಲೀಲ ವಿಡಿಯೋ ಹರಿಬಿಡುವುದಾಗಿ ಶಾಸಕ ಪ್ರಭು ಚವಾಣ್‌ಗೆ ಬೆದರಿಕೆಯೊಡ್ಡಿ ಹಣಕ್ಕೆ ಬೇಡಿಕೆ

ಓಲೈಕೆಯಿಂದ ಜನರಿಗೆ ತೊಂದರೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments