Publish Date: Sat, 17 Feb 2018 (20:17 IST)
Updated Date: Sat, 17 Feb 2018 (20:18 IST)
ಹಿಂದುತ್ಚವನ್ನು ಗುತ್ತಿಗೆ ಹಿಡಿದವರಂತೆ ಬಿಜೆಪಿಯವರು ನಡೆದುಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಟೀಕಿಸಿದ್ದಾರೆ.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಹಿಂದುತ್ವದ ಹೆಸರಿನಲ್ಲಿ ಬಿಜೆಪಿಯವರು ಜಾತಿ ಜಾತಿ ನಡುವೆ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವದ ಹೆಸರಿನಲ್ಲಿ ವಿಷಬೀಜ ಬಿತ್ತುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಬಂದಾಗ ದೇವಸ್ಥಾನಗಳಿಗೆ ತೆರಳಿದ್ದರಿಂದ ಬಿಜೆಪಿಯವರಿಗೆ ಏಕೆ ಹೊಟ್ಟೆ ಉರಿ ಎಂದು ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.