Webdunia - Bharat's app for daily news and videos

Install App

ಇಂದು ಬಿಜೆಪಿಯಿಂದ ಅದ್ಧೂರಿ ಜನಸ್ಪಂದನ ಸಮಾವೇಶ

Webdunia
ಶನಿವಾರ, 10 ಸೆಪ್ಟಂಬರ್ 2022 (09:37 IST)
ಚಿಕ್ಕಬಳ್ಳಾಪುರ : ಮುಂದಿನ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ. ಈ ಸಿದ್ಧತೆಯ ಭಾಗವಾಗಿ ದೊಡ್ಡಬಳ್ಳಾಪುರದಲ್ಲಿ ಇಂದು ಬೃಹತ್ ಜನಸ್ಪಂದನ ಸಮಾವೇಶ ಆಯೋಜಿಸಲಾಗಿದೆ.

ಜನಸ್ಪಂದನ ಸಮಾವೇಶದ ಮೂಲಕ 2023ರ ಚುನಾವಣೆಗೆ ರಾಜ್ಯ ಬಿಜೆಪಿ ದೊಡ್ಡಬಳ್ಳಾಪುರದಿಂದ ಕಹಳೆ ಮೊಳಗಿಸುತ್ತಿದೆ. 40 ಎಕರೆ ಮೈದಾನದಲ್ಲಿ ಜನಸ್ಪಂದನ ಕಾರ್ಯಕ್ರಮ ಬೃಹತ್ ವೇದಿಕೆ ಸಿದ್ಧವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಯನ್ನು ಸಿಎಂ ಬೊಮ್ಮಾಯಿ ಜನರ ಮುಂದಿಡಲಿದ್ದಾರೆ.

ಜನಸ್ಪಂದನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಉಳಿದಂತೆ ರಾಜ್ಯ ಬಿಜೆಪಿ ನಾಯಕರು, ಸಚಿವರು, ಸಂಸದರು, ಶಾಸಕರು, ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ.

ಸಮಾವೇಶಕ್ಕೆ 1,200*140 ಅಡಿ ಉದ್ದ ಮತ್ತು ಅಗಲ ವಿಸ್ತೀರ್ಣದ ಬೃಹತ್ ವೇದಿಕೆ ನಿರ್ಮಾಣಗೊಂಡಿದ್ದು, ಸುಮಾರು 100 ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದಲ್ಲಿ 3 ಲಕ್ಷ ಜನ ಭಾಗಿಯಾಗುವ ನಿರೀಕ್ಷೆಯಿದೆ. 

ಎಲ್ಇಡಿ ಸ್ಕ್ರೀನ್ ಮೂಲಕ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. 15 ಅಡಿ ಎತ್ತರ, 90 ಅಡಿ ಅಗಲದ ಬೃಹತ್ ಎಲ್ಇಡಿ ಸ್ಕ್ರೀನ್ ಹಾಕಲಾಗಿದ್ದು ಕಾರ್ಯಕರ್ತರಿಗೆ ಉಪಹಾರ ಮತ್ತು ಊಟಕ್ಕಾಗಿ 203 ಕೌಂಟರ್ಗಳ ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments