ಬಿಜೆಪಿಯವರಿಗೆ ಕಾಮಾಲೆ ರೋಗ ಬಂದಿದೆ-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Webdunia
ಮಂಗಳವಾರ, 16 ಆಗಸ್ಟ್ 2022 (17:46 IST)
ಬಿಜೆಪಿಯವರಿಗೆ ಕಾಮಾಲೆ ರೋಗ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ. ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರದಲ್ಲಿ ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಬಗ್ಗೆ ಮಾತನಾಡಿದ ಅವರು, ಬಿಜೆಪಿಗೆ ಕಾಮಾಲೆ ರೋಗ ಬಂದಿದೆ. ಸುಳ್ಳು ಹೇಳುವುದು, ಸುಳ್ಳು ಹಬ್ಬಿಸುವ ರೋಗ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಿದ್ದಾರೆ. ಹಾಕಲಿ ಬೇಡ ಅನ್ನಲ್ಲ. ಆದರೆ ಟಿಪ್ಪು ಫೋಟೋ ತೆಗೆದಿದ್ದಾರೆ. ಹೀಗೆ ಮಾಡಿದರೆ ಗಲಭೆ ಆಗಲ್ವಾ? ಈಶ್ವರಪ್ಪ ಕಾಂಗ್ರೆಸ್ ಬಗ್ಗೆ ಆರೋಪ ಮಾಡುತ್ತಾನೆ ಇರುತ್ತಾರೆ. ತಪ್ಪು ಅವರು ಮಾಡಿ ಕಾಂಗ್ರೆಸ್ ಮೇಲೆ ಹಾಕುತ್ತಾರೆ. ಮಗೂನು ಚಿವುಟುತ್ತಾರೆ, ತೊಟ್ಟಿಲು ಕೂಡ ತೂಗುತ್ತಾರೆ ಎಂದು ಕಿಡಿಕಾರಿದ್ದಾರೆ. ಘಟನೆಯಲ್ಲಿ ಎಸ್‍ಡಿಪಿಐ ಅವರಿದ್ದರೆ ಕ್ರಮ ತೆಗೆದುಕೊಳ್ಳಿ. ಸರ್ಕಾರ ನಿಮ್ಮದೆ ಇದೆ. ಎಸ್‍ಡಿಪಿಐ, ಪಿಎಫ್‍ಐ ಸಾಮರಸ್ಯ ಹಾಳು ಮಾಡುತ್ತಿದ್ದಾರೆ ಎಂಬ ಬಗ್ಗೆ ನಿಮ್ಮ ಬಳಿ ದಾಖಲೆ ಇದ್ದರೆ ಕ್ರಮ ತೆಗೆದುಕೊಳ್ಳಿ. ಇಬ್ಬಂದಿ ರಾಜಕೀಯ ಮಾಡಬೇಡಿ. ಸಿಎಂ ಪ್ರವೀಣ್ ಮನೆಗೆ ಮಾತ್ರ ಹೋಗುತ್ತಾರೆ. ಇನ್ನಿಬ್ಬರ ಮನೆಗೆ ಯಾಕೆ ಹೋಗಲ್ಲ. ಸರ್ಕಾರದ ದುಡ್ಡು ಅಲ್ವಾ, ತೆರಿಗೆ ಹಣ ಅಲ್ವಾ. ಅವರಿಬ್ಬರಿಗೂ ಪರಿಹಾರ ಕೊಡಬೇಕಲ್ವಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments