ಜನರಲ್ಲಿ ಕೋಮುಭಾವನೆ ಕೆರಳಿಸಿ, ಬೆಂಕಿ ಹಚ್ಚುವುದೇ ಬಿಜೆಪಿಯ ಕೆಲಸ: ಶಿವಕುಮಾರ್‌ ವಾಗ್ದಾಳಿ

Sampriya
ಬುಧವಾರ, 10 ಸೆಪ್ಟಂಬರ್ 2025 (14:26 IST)
Photo Credit X
ಬೆಂಗಳೂರು: ಜನದ ಮಧ್ಯೆ ಕೋಮುಭಾವನೆ ಕೆರಳಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕಾಯಕ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಬಿಜೆಪಿಯವರಿಗೆ ರಾಜಕಾರಣ ಮಾಡುವುದು ಬಿಟ್ಟು ಬೇರೆ ಕೆಲಸ ಏನಿದೆ. ಅವರು ದೆಹಲಿಗೆ ಹೋಗಿ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು, ನರೇಗಾ ಅನುದಾನ, ಮೇಕೆದಾಟು, ಮಹದಾಯಿ ನೀರಾವರಿ ಯೋಜನೆಗಳಿಗೆ ಅನುಮತಿ ತೆಗೆದುಕೊಂಡು ಬರಲಿ ಎಂದು ಸವಾಲೆಸೆದರು.

ಮದ್ದೂರು ಪ್ರಕರಣದ ಬಗ್ಗೆ ಈಗಾಗಲೇ ಸಿಎಂ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಹೊರ ರಾಜ್ಯಕ್ಕೆ ಹೋಗಿದ್ದ ಹಿನ್ನೆಲೆಯಲ್ಲಿ ನನಗೆ ಈ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನನಗೆ ಸಂಪೂರ್ಣ ಮಾಹಿತಿ ಸಿಗದೇ ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.

ಸತೀಶ್ ಸೈಲ್ ಅವರ ಬಂಧನದ ಅವಶ್ಯಕತೆ ಇರಲಿಲ್ಲ. ಈ ಪ್ರಕರಣದ ವಿಚಾರಣೆ 2010ರಿಂದಲೇ ನಡೆಯುತ್ತಿದೆ. ಕಾಂಗ್ರೆಸ್ ಶಾಸಕರ ಮೇಲೆ ಮಾತ್ರ ಗುರಿಯಾಗಿಸಿ ಇಂತಹ ದಾಳಿಗಳು ನಡೆಯುತ್ತಿವೆ. ಆ ಮೂಲಕ ಕಾಂಗ್ರೆಸ್ ನಾಯಕರಿಗೆ ತೊಂದರೆ ನೀಡುವ ಕೆಲಸ ನಡೆಯುತ್ತಿದೆ ಎಂದು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಬಂಧನದ ವಿಚಾರವಾಗಿ ಪ್ರತಿಕ್ರಿಯಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments