Publish Date: Tue, 03 Oct 2017 (19:03 IST)
Updated Date: Tue, 03 Oct 2017 (19:05 IST)
ಪ್ರಧಾನಿ ಮೋದಿ ಕಾರ್ಯವೈಖರಿ, ದುರಾಡಳಿತದ ವಿರುದ್ಧ ಬಿಜೆಪಿ ನಾಯಕರೇ ವಾಗ್ದಾಳಿ ನಡೆಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ಧ ಬಿಜೆಪಿ ನಾಯಕರಾದ ಯಶ್ವಂತ್ ಸಿನ್ಹಾ, ಎಸ್.ಎಂ.ಕೃಷ್ಣ ಸೇರಿದಂತೆ ಹಲವಾರು ಬಿಜೆಪಿ ನಾಯಕರೇ ವಾಗ್ದಾಳಿ ನಡೆಸಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಗೆ ಬಿಜೆಪಿಗೆ ಸೇರ್ಪಡೆಯಾದ ನಂತರ ಅಲ್ಲಿನ ಪರಿಸ್ಥಿತಿ ಗಮನಕ್ಕೆ ಬಂದಿದೆ ಎಂದು ಲೇವಡಿ ಮಾಡಿದರು.
ಪ್ರಧಾನಮಂತ್ರಿ ಮೋದಿ ದುರಾಡಳಿತದ ವಿರುದ್ಧ ಬಿಜೆಪಿ ನಾಯಕರೇ ಬಹಿರಂಗ ವಾಗ್ದಾಳಿ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಆರೋಪಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.