Publish Date: Thu, 28 Mar 2019 (19:46 IST)
Updated Date: Thu, 28 Mar 2019 (19:47 IST)
ಬಿಜೆಪಿ ಟಿಕೆಟ್ ಕೈ ತಪ್ಪುವ ಭರದಲ್ಲಿ ಪಕ್ಷದ ರಾಜ್ಯಾಧ್ಯಕ್ಷರನ್ನು ಸಂಸದರು ಭೇಟಿ ಮಾಡಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಅವರನ್ನು ಕೊಪ್ಪಳ ಸಂಸದ ಸಂಗಣ್ಣ ಕರಡಿ ಭೇಟಿ ಮಾಡಿದ್ದಾರೆ.
ಕೊಪ್ಪಳ ಟಿಕೆಟ್ ವಿಚಾರವಾಗಿ ಯಡಿಯೂರಪ್ಪ ಭೇಟಿ ಮಾಡಿದ್ರು.
ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹೇರಲು ಮುಂದಾದ ಸಂಗಣ್ಣ ಕರಡಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿನ ಬದಲಾವಣೆಯಿಂದ ಆತಂಕಗೊಂಡಿದ್ದಾರೆ. ಕೊನೆ ಗಳಿಗೆಯಲ್ಲಿ ಟಿಕೆಟ್ ತಪ್ಪಿದರೆ ಎಂಬ ಆತಂಕದಲ್ಲಿರವ ಸಂಗಣ್ಣ ಪಕ್ಷದ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ್ರು.
ಹೀಗಾಗಿ ತಮ್ಮ ಬೆಂಬಲಿಗರ ಮೂಲಕ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡ ಸಂಗಣ್ಣ ಕರಡಿ ಮಾತಿಗೆ,
ಹೈಕಮಾಂಡ್ ನಾಯಕರ ಜೊತೆ ಮತ್ತೊಮ್ಮೆ ಮಾತುಕತೆ ನಡೆಸುವ ಭರವಸೆಯನ್ನು ಯಡಿಯೂರಪ್ಪ ನೀಡಿದ್ರು.