Publish Date: Mon, 11 Dec 2017 (12:17 IST)
Updated Date: Mon, 11 Dec 2017 (12:19 IST)
ಪರಿವರ್ತನಾ ಯಾತ್ರೆ ಕೈಗೊಳ್ಳುತ್ತಿರುವ ಬಿಜೆಪಿ ಪಕ್ಷದ ನಾಯಕರು ಮನ ಪರಿವರ್ತನೆ ಮಾಡಿಕೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮಾತಾನಾಡಿದ ಅವರು, ಚುನಾವಣೆ ಬಂದಾಗ ಬಿಜೆಪಿಗೆ ದಲಿತರು, ಹಿಂದುಳಿದವರು ನೆನಪಾಗುತ್ತಾರೆ. ಪರಿವರ್ತನಾ ಯಾತ್ರೆ ಕೈಗೊಂಡು ಬಿಜೆಪಿಯವರು ಜನರಿಗೆ ಸುಳ್ಳು ಭರವಸೆ ನಿಡುತ್ತಿದ್ದಾರೆ ಎಂದು ದೂರಿದ್ದಾರೆ.
ಯಾವುದೇ ಭ್ರಷ್ಟಾಚಾರವಿಲ್ಲದೆ ಪಾರದರ್ಶಕವಾಗಿ ಆಡಳಿತ ನೀಡಿರುವ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಕೂಡ ನಮ್ಮ ಸರ್ಕಾರದ ಆಡಳಿವನ್ನು ಮೆಚ್ಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.