Webdunia - Bharat's app for daily news and videos

Install App

ಹುಬ್ಬಳ್ಳಿಯ ಅಪ್ರಾಪ್ತೆಯ ಮೇಲೆ ಅನ್ಯಕೋಮಿನ ಯುವಕನಿಂದ ಅತ್ಯಾಚಾರ: ಬಿಜೆಪಿ ಆಕ್ರೋಶ

Krishnaveni K
ಶನಿವಾರ, 4 ಮೇ 2024 (11:56 IST)
ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಹಿಂದೂ ಬಾಲಕಿ ಮೇಲೆ ಅನ್ಯಕೋಮಿನ ಯುವಕ ಅತ್ಯಾಚಾರವೆಸಗಿದ ಘಟನೆ ಭಾರೀ ಸದ್ದು ಮಾಡುತ್ತಿದೆ.

ಕಾಂಗ್ರೆಸ್ ನ ಸಹೋದರರಿಂದ ಮತ್ತೊಬ್ಬ ಹಿಂದೂ ಯುವತಿ ಮೇಲೆ ನಡೆದ ದಾಳಿ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ಹಿಂದೂ ಹೆಣ‍್ಣು ಮಕ್ಕಳ ಮೇಲೆ ಮತ್ತೊಂದು ಅತ್ಯಾಚಾರ. ತಾಲಿಬಾನಿ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ಸುರಕ್ಷತೆ ಇಲ್ಲ. ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂ ಯುವತಿಯರು ಮನೆಯಿಂದ ಹೊರಬರುವುದೇ ಕಷ್ಟವಾಗಿದೆ. ಈ ಹಿಂದೂ ವಿರೋಧಿ ಸರ್ಕಾರ ತೊಲಗಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಯುವಕ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಪರಿಣಾಮ ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.  ಈ ಸಂಬಂಧ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಸ್ಥಳೀಯರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸ್ಥಳೀಯರು ಪ್ರತಿಭಟನೆ ನಡೆಸಿದ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಪೊಲೀಸ್ ಕಾರ್ಯಾಚರಣೆ ವೇಳೆ ಆರೋಪಿ ಹಲ್ಲೆ ನಡೆಸಲು ಮುಂದಾಗಿದ್ದ. ಈ  ವೇಳೆ ಪೊಲೀಸರು ಆತನ ಕಾಲಿಗೆ ಗುಂಡೇಟು ಹಾಕಿದ್ದಾರೆ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ