Select Your Language

Notifications

webdunia
webdunia
webdunia
Tuesday, 8 April 2025
webdunia

ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಕಿಡಿ

BJP spark against BK Hariprasad
bangalore , ಶುಕ್ರವಾರ, 9 ಜೂನ್ 2023 (19:08 IST)
RSS ಸಂಸ್ಥಾಪಕರಲ್ಲಿ ಒಬ್ಬರಾದ ಕೇಶವ ಬಲಿರಾಮ್ ಹೆಡಗೇವಾರ್ ತರಹದ ಹೇಡಿಗಳ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ ಎಂಬ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ರಾಜ್ಯ ಬಿಜೆಪಿ ಕಿಡಿಕಾರಿದೆ. ಗೌರವಾನ್ವಿತ ಹೆಡಗೇವಾರ್​ ರಂತಹ ಅಪ್ರತಿಮ ದೇಶ ಭಕ್ತರ ಹೆಸರು ಹೇಳುವ ಯೋಗ್ಯತೆಯನ್ನು ಹರಿಪ್ರಸಾದ್​ ಮೊದಲು ಸಂಪಾದಿಸಲಿ, ಉಳಿದದ್ದೆಲ್ಲ ಮತ್ತೆ ಎಂದು ಟೀಕಿಸಿದೆ. ಶಿವಮೊಗ್ಗದಲ್ಲಿ ಮಾತನಾಡಿದ್ದ ಹರಿಪ್ರಸಾದ್ ಅವರು, ಶಿಕ್ಷಣ ಸೇರಿದಂತೆ ಸರ್ಕಾರದ ಯಾವ ಇಲಾಖೆಯಲ್ಲೂ ಸಂಘ ಪರಿವಾರದ ಸಿದ್ಧಾಂತಗಳು ನುಸುಳಲು ಅವಕಾಶ ನೀಡುವುದಿಲ್ಲ. ಹೆಡಗೇವಾರ್ ತರಹದ ರಣಹೇಡಿಗಳ ವಿಚಾರ ಇನ್ನು ಮುಂದೆ ಪಠ್ಯದಲ್ಲಿ ಇರುವುದಿಲ್ಲ ಎಂದಿದ್ದರು. ಅವರೆಲ್ಲ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ನೀಡಿದ್ದು ಏಕೆ ಎಂಬುದನ್ನು ಬಹಿರಂಗ ಪಡಿಸಲಿ ಎಂದು ಸವಾಲು ಹಾಕಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯವರು ಇತಿಹಾಸ ತಿರುಚುತ್ತಿದ್ಧಾರೆ