ಜಮೀರ್ ವಿವಾದದ ಹೇಳಿಕೆಗೆ ಬಿಜೆಪಿ ಕಿಡಿ

Webdunia
ಸೋಮವಾರ, 11 ಡಿಸೆಂಬರ್ 2023 (18:21 IST)
ಸಚಿವ ಜಮೀರ್ ಅಹ್ಮದ್ ಖಾನ್ ವಿವಾದದ ಹೇಳಿಕೆ ಸದನದಲ್ಲಿ ಕೋಲಾಹಲ ಎಬ್ಬಿಸಿದೆ. ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಜಮೀರ್ ವಿವಾದದ ಹೇಳಿಕೆಗೆ ಬಿಜೆಪಿ ಕಿಡಿಕಾರಿದೆ. ಜಮೀರ್ ಅವರು ಪ್ರಶ್ನೆಗೆ ಉತ್ತರಿಸಲು ಮುಂದಾದಾಗ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಧ್ಯಪ್ರವೇಶ ಮಾಡಿ, ಜಮೀರ್ ಅಹಮ್ಮದ್ ಖಾನ್ ಸ್ಪೀಕರ್ ಸ್ಥಾನಕ್ಕೆ ಅವಮಾನ ಮಾಡಿದ್ದಾರೆ.

ಹಿಂದೂ, ಮುಸ್ಲಿಂ ಭಾವನೆ ಕೆದಕಿದ್ದಾರೆ, ಅವರಿಗೆ ಮಾತನಾಡಲು ಅವಕಾಶ ಕೊಡಲ್ಲ ಎಂದು ಹೇಳಿದ್ರು.. ಸ್ಪೀಕರ್ ಸ್ಥಾನಕ್ಕೆ ಅವಮಾನ ಮಾಡಿದ್ದಾರೆ. ಕೂಡಲೇ ಅವರನ್ನು ವಜಾ ಮಾಡುವಂತೆ ಆರ್.ಅಶೋಕ್ ಆಗ್ರಹಿಸಿದ್ರು. ನಾವೇನು ಗುಲಾಮರಾ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದು, ಈ ವೇಳೆ ಅಶೋಕ್ ಮಾತಿಗೆ ಬಿಜೆಪಿ ಇತರ ಸದಸ್ಯರು ಧ್ವನಿಗೂಡಿಸಿದ್ರು. ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ ಸೇರಿದಂತೆ ಬಿಜೆಪಿ ಸದಸ್ಯರು ವಾಗ್ದಾಳಿ ನಡೆಸಿದ್ರು.

ನೋಟಿಸ್ ಕೊಟ್ಟು ಮಾತನಾಡಲಿ, ಪ್ರಶ್ನೋತ್ತರ ‌ಅವಧಿಯಲ್ಲಿ ಈ‌ ರೀತಿ ಮಾಡುವುದು ಸರಿಯಲ್ಲ ಎಂದು ಸಚಿವ ಕೃಷ್ಣಬೈರೇಗೌಡ ಆಕ್ಷೇಪ ವ್ಯಕ್ತಪಡಿಸಿದ್ರು. ಬಳಿಕ ಸ್ಪೀಕರ್ U.T.ಖಾದರ್​​​​ ಹತ್ತು ನಿಮಿಷಗಳ ಕಾಲ ಸದನ ಮುಂದೂಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೂವರೆ ವರ್ಷದ ಕಂದಮ್ಮನ ಮೇಲೆ ಹಲ್ಲೆ ಎಸಗಿ ಕೊಲೆ ಮಾಡಿದ ಪಾಪಿಗಳು ಸ್ಥಳಕ್ಕೆ ಬಂದಾಗ ಸಾರ್ವಜನಿಕರು ಏನ್ ಮಾಡಿದ್ರು ನೋಡಿ, Video

ಮಂಗನ ಕೈಗೆ ಸಿಕ್ತು 2 ಲಕ್ಷ ರೂಪಾಯಿ, ಆದ್ರೂ ಕೋತಿ ಬುದ್ಧಿ ಬಿಡುತ್ತಾ.. video ನೋಡಿ

ಹೊಸ ರಾಜಕೀಯ ಪಕ್ಷ ಸ್ಥಾಪನೆ ವದಂತಿ ನಡುವೆ ಕುತೂಹಲ ಮೂಡಿಸಿದ ಕೆ ಅಣ್ಣಾಮಲೈ ಈ ನಡೆ

ಮಂಗಳೂರು: ಜೂನ್ 1 ರಿಂದ 61 ದಿನಗಳ ಕಾಲ ಮೀನುಗಾರಿಕೆ ನಿಷೇಧ ಹೇರುವುದು ಯಾಕೆ ಗೊತ್ತಾ

ಪಂಜಾಬ್: ಯಂತ್ರೋಪಕರಣ ಕಾರ್ಖಾನೆಯಲ್ಲಿ ಅನಿಲ ಸೋರಿಕೆ, ಮೂವರು ಸಾವು, ಇಬ್ಬರು ಆಸ್ಪತ್ರೆಗೆ ದಾಖಲು

ಮುಂದಿನ ಸುದ್ದಿ
Show comments