Publish Date: Tue, 20 Mar 2018 (11:58 IST)
Updated Date: Tue, 20 Mar 2018 (12:01 IST)
ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮ ರಚನೆ ಕುರಿತು ಇದುವರೆಗೆ ತಟಸ್ಥವಾಗಿದ್ದ ಬಿಜೆಪಿ ಇದೀಗ ತನ್ನ ನಿಲುವು ಸ್ಪಷ್ಟಪಡಿಸಬೇಕಾದ ಅನಿವಾರ್ಯತೆಗೆ ಸಿಲುಕಿದೆ.
ರಾಜ್ಯ ಸಚಿವ ಸಂಪುಟ ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ ನೀಡಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಇಂದು ತಮ್ಮ ಡಾಲರ್ಸ್ ಕಾಲೊನಿ ನಿವಾಸದಲ್ಲಿ ಸಭೆ ನಡೆಸಿದ್ದು ಇದರ ಬಗ್ಗೆ ಚರ್ಚೆ ನಡೆಸಿದ್ದಾರೆ.
ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಎಸ್ ವೈ ವೀರಶೈವ ಮಹಾಸಭಾದ ಸ್ವಾಮೀಜಿಗಳು ಈ ಬಗ್ಗೆ ಶೀಘ್ರದಲ್ಲೇ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಿ. ಅವರ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ