Publish Date: Sat, 10 Feb 2018 (17:34 IST)
Updated Date: Sat, 10 Feb 2018 (17:37 IST)
ಬಿಜೆಪಿ ಇನ್ನೂ 20 ಮಂದಿ ಶಾಸಕರು ಕಾಂಗ್ರೆಸ್‍ಗೆ ಸೇರ್ಪಡೆಯಾಗಲು ತಯಾರಾಗಿದ್ದು, ಮಾತುಕತೆಯೂ ನಡೆದಿದೆ. ಆದರೆ ಗೆಲ್ಲುವ ಸಾಮರ್ಥ್ಯ ಇರುವವರನ್ನು ಮಾತ್ರ ಸೇರಿಸಿಕೊಳ್ಳಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಆನಂದ್‍ಸಿಂಗ್, ಬಿ.ನಾಗೇಂದ್ರ ಅವರು ಈಗಾಗಲೇ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಆದರೆ, ಇನ್ನೂ 20 ಮಂದಿ ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರಲು ಸಿದ್ಧರಾಗಿದ್ದಾರೆ ಎಂದರು.
ಕಾಂಗ್ರೆಸ್‍ಗೆ ಸೇರ್ಪಡೆಯಾಗುವವರನ್ನು ಏಕಾಏಕಿ ಪಕ್ಷಕ್ಕೆ ಕರೆದುಕೊಳ್ಳುವುದಿಲ್ಲ. ಆಯ್ದ ಶಾಸಕರನ್ನು ಮಾತ್ರ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲಾಗುತ್ತದೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.