Select Your Language

Notifications

webdunia
webdunia
webdunia
webdunia

ಬಿಜೆಪಿಯಿಂದ ಜನ ಸ್ವರಾಜ್ ಕಾರ್ಯಕ್ರಮ ಭರ್ಜರಿ ತಯಾರಿ

ಬಿಜೆಪಿಯಿಂದ ಜನ ಸ್ವರಾಜ್ ಕಾರ್ಯಕ್ರಮ ಭರ್ಜರಿ ತಯಾರಿ
ಬೆಂಗಳೂರು , ಗುರುವಾರ, 18 ನವೆಂಬರ್ 2021 (15:44 IST)
ವಿಧಾನ ಪರಿಷತ್ ಹಾಗೂ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದು ಹಾಗೂ ಪಕ್ಷವನ್ನು ಮತ್ತಷ್ಟು ಸಂಘಟಿಸಿ 2023ರ ಚುನಾವಣೆಗೆ ಬಿಜೆಪಿ ಇಂದಿನಿಂದಲೇ ಜನ ಸ್ವರಾಜ್ ಸಮಾವೇಶದ ಮೂಲಕ ರಣಕಹಳೆ ಮೊಳಗಿಸಿದೆ.ರಾಜ್ಯದ ನಾಲ್ಕು ಭಾಗಗಳಲ್ಲಿ ನಾಲ್ಕು ಪ್ರತ್ಯೇಕ ತಂಡಗಳು ಇಂದಿನಿಂದ ಮೂರು ದಿನಗಳ ಕಾಲ ಜನ ಸ್ವರಜ್ ಸಮಾವೇಶ ನಡೆಸುವ ಮೂಲಕ ಮುಂಬರುವ ಎಲ್ಲಾ ಹಂತದ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿದೆ.ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ತಂಡ ಕೊಪ್ಪಳ ಜಿಲ್ಲಾಯಲ್ಲಿ ಸಮಾವೇಶಕ್ಕೆ ಚಾಲನೆ ನೀಡಿದರು. ಇತ್ತ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಮತ್ತೊಂದು ತಂಡ ಉತ್ತರ ಕನ್ನಡ ಜಿಲ್ಲಾಯ ಯಲ್ಲಾಪುರದಲ್ಲಿ ಸಮಾವೇಶಕ್ಕೆ ಹಸಿರು ನಿಶಾನೆ ತೋರಿದರು.
 
ದಾವಣಗೆರೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಅವರ ನಾಲ್ಕನೇ ತಂಡ ಚಿಕ್ಕಮಗಳೂರಿನಲ್ಲಿ ಚಾಲನೆ ನೀಡಿದರು. ಹೀಗೆ ನಾಲ್ಕು ತಂಡಗಳು ಪ್ರತ್ಯೇಕವಾಗಿ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮೂರು ದಿನ ಸಮಾವೇಶ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲಿದ್ದಾರೆ.
 
ಮೊದಲನೆ ತಂಡವು ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲಾಗಳ ಪ್ರವಾಸ ಮಾಡಲಿದೆ. ಇದರ ಸಂಚಾಲಕರಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಹ ಸಂಚಾಲಕರಾಗಿ ಕೇಶವ ಪ್ರಸಾದ್ ಇರುತ್ತಾರೆ.
 
ಎರಡನೆ ತಂಡವು ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸಂಚಾಲಕತ್ವ ಹೊಂದಿದ್ದು, ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ್ ಅವರ ಸಹ ಸಂಚಾಲಕತ್ವದಲ್ಲಿ ನಾಲ್ಕು ದಿನಗಳ ಕಾಲ ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ ಮತ್ತು ಚಿಕ್ಕೋಡಿ, ಬೆಳಗಾವಿಗಳಲ್ಲಿ ಸಂಚರಿಸಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಿ.ಯು.ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್