ಬೆಂಗಳೂರು : ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದೆ. ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಕುರಿತು ಚರ್ಚೆಗಳು ಶುರುವಾಗಿದೆ. ಈ ಬಾರಿ ಗೆಲ್ಲುವ ಕುದುರೆಗಳನ್ನು ಮಾತ್ರ ಕಣಕ್ಕೆ ಇಳಿಸುವ ಲೆಕ್ಕಾಚಾರದಲ್ಲಿ ವರಿಷ್ಠರಿದ್ದಾರೆ.
ಈ ಬೆನ್ನಲ್ಲೇ ಟಿಕೆಟ್ ವಿತರಣೆಯಲ್ಲಿ ಗುಜರಾತ್ ಮಾಡೆಲ್ ಜಾರಿಗೊಳಿಸುವ ಸಾಧ್ಯತೆ ಬಗ್ಗೆ ಪಕ್ಷದ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಆಡಳಿತ ವಿರೋಧಿ ಅಲೆಯನ್ನು ಬೇಗನೇ ಗ್ರಹಿಸಿ ಹಾಲಿ ಶಾಸಕರಿಗೆ ಕೊಕ್ ನೀಡುವ ಸೂತ್ರ ಹೆಣೆಯುವ ಸಾಧ್ಯತೆ ಇದೆ.
ಬಿಜೆಪಿ ಹೈಕಮಾಂಡ್ ಇತ್ತೀಚೆಗೆ ನಡೆದ ಗುಜರಾತ್ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಇದೇ ತಂತ್ರ ಪ್ರಯೋಗಿಸಿತ್ತು. ಈ ಹೊಸ ಪ್ರಯೋಗ ಬಿಜೆಪಿಗೆ ಗುಜರಾತ್ನಲ್ಲಿ ಶೇ.95 ರಷ್ಟು ಯಶಸ್ಸು ತಂದುಕೊಟ್ಟಿದೆ. ಇದೇ ನಿರೀಕ್ಷೆಯನ್ನು ರಾಜ್ಯದಲ್ಲೂ ಹೊಂದಲಾಗಿದೆ.