Publish Date: Sat, 16 Nov 2019 (10:49 IST)
Updated Date: Sat, 16 Nov 2019 (10:51 IST)
ಬಳ್ಳಾರಿ : ಉಪಚುನಾವಣೆಯ ಹಿನ್ನಲೆಯಲ್ಲಿ ಅನರ್ಹ ಶಾಸಕ ಆನಂದ್ ಸಿಂಗ್ ಗೆ ಬಿಜೆಪಿ ಟಿಕೆಟ್ ನೀಡಿದ್ದಕ್ಕೆ ಹೊಸಪೇಟೆ ಕಾರ್ಯಕರ್ತರು ಬಿಜೆಪಿ ನಾಯಕರ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಉಪಚುನಾವಣೆಯ ಹಿನ್ನಲೆಯಲ್ಲಿ ಹೊಸಪೇಟೆ ಬಿಜೆಪಿ ಕಚೇರಿಯಲ್ಲಿ ಪರಿಷತ್ ಸದಸ್ಯ ರವಿ ಕುಮಾರ್ ನೇತೃತ್ವದಲ್ಲಿ ಕಾರ್ಯಕರ್ತರು ಹಾಗೂ ಮುಖಂಡರ ಸಭೆ ನಡೆಸಲಾಗಿದ್ದು, ಈ ವೇಳೆ ಕಾರ್ಯಕರ್ತರು, ಮೋದಿ ಚೋರ್ ಹೈ ಎಂದ ಆನಂದ್ ಸಿಂಗ್ ಗೆ ಯಾರನ್ನು ಕೇಳಿ ಟಿಕೆಟ್ ನೀಡಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಸಭೆಯಲ್ಲಿ ಗದ್ದಲ ಏರ್ಪಟ್ಟಿದ್ದು, ಕಾರ್ಯಕರ್ತರ ಪ್ರಶ್ನೆಗೆ ಉತ್ತರಿಸಲಾಗದೇ ರವಿ ಕುಮಾರ್ ಸಭೆಯಿಂದ ಹೊರಗೆ ನಡೆದಿದ್ದಾರೆ ಎನ್ನಲಾಗಿದೆ.