Select Your Language

Notifications

webdunia
webdunia
webdunia
webdunia

ಬೆಂಗಳೂರಿನ ಅವ್ಯವಸ್ಥೆ ವಿರುದ್ಧ ಮೇ 28 ಕ್ಕೆ ಬಿಜೆಪಿ ಪ್ರತಿಭಟನೆ

BY Vijayendra

Krishnaveni K

ಬೆಂಗಳೂರು , ಶುಕ್ರವಾರ, 24 ಮೇ 2024 (14:50 IST)
ಬೆಂಗಳೂರು: ಬೆಂಗಳೂರಿನ ಅವ್ಯವಸ್ಥೆಗಳ ವಿರುದ್ಧ ಇದೇ 28ರಂದು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು.
 
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ತಮ್ಮ ನೇತೃತ್ವದಲ್ಲಿ ಇಂದು ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚೆಗಾಗಿ ನಡೆಸಿದ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಬೆಂಗಳೂರು ನಗರದ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರತಿ ವಾರ್ಡಿನಲ್ಲಿ ಬಿಜೆಪಿ ವತಿಯಿಂದ ಹೋರಾಟವನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದರು.

ಬೆಂಗಳೂರು ಮಹಾನಗರದ ಜನತೆಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಬಿಜೆಪಿ ಹೋರಾಟ ನಿರಂತರವಾಗಿ ಇರಲಿದೆ. ಕೇವಲ ನಾಮಕಾವಾಸ್ತೆ ಹೋರಾಟ ಇದಲ್ಲ ಎಂದು ಸ್ಪಷ್ಟಪಡಿಸಿದರು. ಸಮಸ್ಯೆಗೆ ಪರಿಹಾರ, ಹೋರಾಟಕ್ಕೆ ಜಯ ಸಿಗಬೇಕಿದೆ. ಆ ನಿಟ್ಟಿನಲ್ಲಿ ಹೋರಾಟ ನಡೆಯಲಿದೆ ಎಂದು ವಿವರಿಸಿದರು.

ಇಂದು ನಗರದ ಎಲ್ಲ ಶಾಸಕರು, ಮಾಜಿ ಶಾಸಕರು, ಮಾಜಿ ಕಾರ್ಪೊರೇಟರ್‍ಗಳ ಸಭೆಯನ್ನು ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ ಇವತ್ತು ಆಗುತ್ತಿರುವ ಅವ್ಯವಸ್ಥೆಗಳನ್ನು ಚರ್ಚಿಸಿದ್ದೇವೆ. ಕೇವಲ ಎರಡು ದಿನ ಮಳೆ ಬಂದಾಗ ಬೆಂಗಳೂರಿನ ರಸ್ತೆಗಳು ವಾಹನ ಓಡಾಡದಂತೆ ಬ್ಲಾಕ್ ಆಗಿದ್ದವು. ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ಜನರಿದ್ದಾರೆ. ರಾಜ್ಯದಲ್ಲಿ ಹೊಸ ಸರಕಾರ ಬಂದ ಬಳಿಕ ಒಂದು ವರ್ಷದಲ್ಲಿ ಬೆಂಗಳೂರು ನಗರದ ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ಕೊಟ್ಟಿಲ್ಲ ಎಂದು ಟೀಕಿಸಿದರು.

ಎಷ್ಟೇ ಮಳೆ ಬಂದರೂ ಎದುರಿಸಲು ಸನ್ನದ್ಧರಾಗಿದ್ದೇವೆ ಎಂದು ಆಯುಕ್ತರು ಹೇಳುತ್ತಾರೆ. ತಯಾರಿದ್ದೇವೆ ಎಂದು ಅವರು ಭಾಷಣ ಮಾಡಿದರೂ ಅವ್ಯವಸ್ಥೆಗಳು ಹಾಗೇ ಉಳಿದಿವೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ರಾಜ್ಯ ಸರಕಾರವು ಆಸ್ತಿ ತೆರಿಗೆ, ಮೋಟಾರು ವಾಹನ ತೆರಿಗೆ ಸೇರಿ ಎಲ್ಲ ತೆರಿಗೆಗಳನ್ನು ಹೆಚ್ಚಿಸಿದೆ. ಆದರೆ, ಬೆಂಗಳೂರಿನ ಜನತೆಗೆ ಯಾವುದೇ ಪ್ರಯೋಜನ ಆಗುತ್ತಿಲ್ಲ ಎಂದು ತಿಳಿಸಿದರು.

ರಸ್ತೆಗಳು ಗುಂಡಿಗಳಿಂದ ತುಂಬಿ ಹೋಗಿವೆ. ಕಸ ವಿಲೇವಾರಿಯೂ ಸರಿಯಾಗಿ ಆಗುತ್ತಿಲ್ಲ. ಬೆಂಗಳೂರಿಗೆ ಅತಿ ಹೆಚ್ಚು ಸಚಿವರಿದ್ದರೂ ಈ ನಗರದ ಅಭಿವೃದ್ಧಿ ಕುರಿತು ಯಾರು ಕೂಡ ಚಿಂತನೆ ಮಾಡದೆ ಇರುವುದು ನಿಜವಾಗಿ ಒಂದು ದುರಂತ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪೆನ್ ಡ್ರೈವ್ ಕೇಸ್ ಗಮನ ಬೇರೆಡೆ ಸೆಳೆಯಲು ಕುಮಾರಸ್ವಾಮಿ ನಾಟಕ: ಸಿದ್ದರಾಮಯ್ಯ