ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Krishnaveni K
ಬುಧವಾರ, 19 ನವೆಂಬರ್ 2025 (14:57 IST)
ಪುತ್ತೂರು (ದಕ್ಷಿಣ ಕನ್ನಡ): ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಇದರ ನಡುವೆ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ದಿನೇದಿನೇ ಹೆಚ್ಚಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಇಲ್ಲಿ ಮಾತನಾಡಿದ ಅವರು, ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಅಧಿವೇಶನದಲ್ಲಿ ಮತ್ತು ಹೊರಗಡೆ ಹೋರಾಟ ಮಾಡಲು ಬಿಜೆಪಿ ನಿರ್ಧರಿಸಿದೆ ಎಂದು ಪ್ರಕಟಿಸಿದರು.

ಅಭಿವೃದ್ಧಿ ಕುರಿತು ಚಿಂತಿಸಬೇಕಾದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವ ಸಂಪುಟದವರು ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷವು ತಾನು ನೀಡಿದ ಭರವಸೆಗಳನ್ನು ಈಡೇರಿಸಿಲ್ಲ; ಕಾಂಗ್ರೆಸ್ಸಿನ ಭರವಸೆ ನಂಬಿ ಮೋಸಹೋದ ಭಾವನೆ ಮತದಾರರಲ್ಲಿದೆ ಎಂದು ವಿವರಿಸಿದರು.

ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮಶತಾಬ್ದಿ ಸಂದರ್ಭದಲ್ಲಿ ಇಂದು ಅಭೂತಪೂರ್ವ ಕಾರ್ಯಕ್ರಮ ಇಲ್ಲಿ ಆಯೋಜಿಸಲಾಗಿದೆ ಎಂದರು. ರಾಜ್ಯದ ರೈತರು, ಕಬ್ಬು ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರಕಾರವು ಖರೀದಿ ಕೇಂದ್ರ ತೆರೆದಿಲ್ಲವೆಂದು ಆಕ್ಷೇಪಿಸಿ ಮೆಕ್ಕೆ ಜೋಳ ಬೆಳೆಗಾರರೂ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ವಜಾಕ್ಕೆ ಆಗ್ರಹ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅವರು ಒಂದು ಹೇಳಿಕೆ ನೀಡಿದ್ದಾರೆ. ಕರಾವಳಿ ಭಾಗದ ಯಕ್ಷಗಾನ ಕಲಾವಿದರು ಸಲಿಂಗಕಾಮಿಗಳು ಎಂಬ ಉದ್ಧಟತನದ ಹೇಳಿಕೆಯನ್ನು ನೀಡಿದ್ದಾರೆ ಎಂದು ವಿಜಯೇಂದ್ರ ಅವರು ಖಂಡಿಸಿದರು.

ಅವರ ಹೇಳಿಕೆ ಯಕ್ಷಗಾನ ಕಲಾವಿದರು, ಕರಾವಳಿ ಭಾಗಕ್ಕೆ ಮಾತ್ರವಲ್ಲದೇ ಇಡೀ ಹಿಂದೂ ಸಮಾಜಕ್ಕೆ ಮಾಡಿದ ಅವಮಾನ ಎಂದು ಆಕ್ಷೇಪಿಸಿದರು. ಅವರ ಹೇಳಿಕೆಯು ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಹೇಳಿದರು. ಮುಖ್ಯಮಂತ್ರಿ, ಸರಕಾರಕ್ಕೆ ಇಲ್ಲಿನ ಕಲೆ, ಪರಂಪರೆ, ಸಂಸ್ಕøತಿ ಬಗ್ಗೆ ಕಿಂಚಿತ್ತಾದರೂ ತಕ್ಷಣ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಕಿತ್ತು ಬಿಸಾಕಬೇಕೆಂದು ಒತ್ತಾಯಿಸಿದರು. ಬಿಜೆಪಿ ಮಾತ್ರವಲ್ಲ; ಇಡೀ ಹಿಂದೂ ಸಮಾಜ ಇದನ್ನು ಖಂಡಿಸಬೇಕಿದೆ. ಪಕ್ಷಾತೀತವಾಗಿ ಇದರ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ಪ್ರಶ್ನೆಗೆ ಉತ್ತರಿಸಿದರು.

ಸ್ಪೀಕರ್ ಯು.ಟಿ.ಖಾದರ್ ಅವರ ವಿರುದ್ಧ ಹಿಂದಿನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭ್ರಷ್ಟಾಚಾರದ ಕುರಿತು ಆಧಾರಸಹಿತ ಆರೋಪ ಮಾಡಿದ್ದಾರೆ. ಆ ಸ್ಥಾನದ ಗೌರವ ಉಳಿಸಲು ಅವರೇ ರಾಜೀನಾಮೆ ಕೊಟ್ಟರೆ ಒಳ್ಳೆಯದು ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜ್ಜಿಯ ಧೈರ್ಯವೇ ನನ್ನ ಶಕ್ತಿ: ಬಿಹಾರ ಚುನಾವಣೆ ನಂತರ ಫಸ್ಟ್ ಟೈಂ ಹೊರಗೆ ಬಂದ ರಾಹುಲ್ ಗಾಂಧಿ

ಮೋಸ ಮಾಡಿ ಗೆದ್ದ ಪ್ರಧಾನಿಗಳನ್ನು ನಾನು ಇದುವರೆಗೂ ನೋಡಿಲ್ಲ: ಮೋದಿಗೆ ಸಂತೋಷ್ ಲಾಡ್ ಟಾಂಗ್

ನಾಳೆಯೇ ನಿತೀಶ್‌ ಕುಮಾರ್‌ ಪ್ರಮಾಣವಚನ: ಡಿಸಿಎಂಗಳಾಗಿ ಸಾಮ್ರಾಟ್, ವಿಜಯ್‌ ಆಯ್ಕೆ ಸಾಧ್ಯತೆ

ಸಂಪುಟ ವಿಸ್ತರಣೆಯಲ್ಲೂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ

ಡಿಸೆಂಬರ್‌ನಲ್ಲಿ ಮುಳ್ಳಯ್ಯನಗಿರಿಗೆ ಟ್ರಿಪ್ ಪ್ಲಾನ್ ಮಾಡಿದವರು ಈ ಸುದ್ದಿ ಓದಲೇ ಬೇಕು

ಮುಂದಿನ ಸುದ್ದಿ
Show comments