ಬೆಂಗಳೂರು: ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಅವರ ಕೀಳು ಅಭಿರುಚಿಯ ಹೇಳಿಕೆಯನ್ನು ಖಂಡಿಸಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ನಾಳೆ ಸೆ.4 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು. ಸಿ. ಮಂಜುಳಾ ಅವರು ತಿಳಿಸಿದ್ದಾರೆ.
ದೇಶಪಾಂಡೆ ಅವರು, ಮಹಿಳಾ ಪತ್ರಕರ್ತೆ ರಾಧಾ ಹಿರೇಗೌಡರ್ ಅವರು ಹೇಳಿದ ಪ್ರಶ್ನೆಗೆ ಅವಮಾನಿಸಿರುವುದು ಖಂಡನೀಯ, ಕೂಡಲೇ ಅವರು ಕ್ಷಮೆ ಯಾಚಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
ಮಹಿಳಾ ಪತ್ರಕರ್ತೆ ರಾಧಾ ಹಿರೇಗೌಡರ್ ಅವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸರ್ಜಿತ ಹೆರಿಗೆ ಆಸ್ಪತ್ರೆಯನ್ನು ಯಾವಾಗ ನಿರ್ಮಿಸುತ್ತೀರಿ ಎಂದು ಆರ್.ವಿ. ದೇಶಪಾಂಡೆ ಅವರನ್ನು ಪ್ರಶ್ನಿಸಿದ್ದರು. ಆಗ, ತುಂಬಾ ಹಗುರವಾಗಿ ಮತ್ತು ಅವಮಾನದ ರೀತಿಯಲ್ಲಿ “ನಿನ್ನ ಹೆರಿಗೆ ಆದ ಮೇಲೆ ಮಾಡಿಸುತ್ತೀನಿ” ಎಂದು ಹೇಳುವಷ್ಟು ಒಂದು ಕೀಳು ಅಭಿರುಚಿಯನ್ನು ವ್ಯಕ್ತಪಡಿಸಿರುವುದು ಅತ್ಯಂತ ಖಂಡನೀಯ ಎಂದು ಅವರು ತಿಳಿಸಿದ್ದಾರೆ.