Webdunia - Bharat's app for daily news and videos

Install App

ಡಿಕೆಶಿ ವಿರುದ್ಧ ಮೃದು ಧೋರಣೆ: ಬಿಜೆಪಿ ನಾಯಕರ ನಡೆಗೆ ಹೈಕಮಾಂಡ್ ಅಸಮಧಾನ

Webdunia
ಸೋಮವಾರ, 7 ಆಗಸ್ಟ್ 2017 (14:20 IST)
ಆದಾಯ ತೆರಿಗೆ ದಾಳಿಗೆ ಗುರಿಯಾಗಿದ್ದ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸುವಲ್ಲಿ ರಾಜ್ಯ ಬಿಜೆಪಿ ನಾಯಕರು ವಿಫಲವಾಗಿದ್ದಾರೆ ಎಂದು ಬಿಜೆಪಿ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.
 
ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿಯ ಬಗ್ಗೆ ಕಾಂಗ್ರೆಸ್ ನಾಯಕರು ಸಂಸತ್ತಿನಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ರಾಜ್ಯ ಸರಕಾರ ಭ್ರಷ್ಟರಿಗೆ ರಕ್ಷಣೆ ನೀಡುತ್ತಿದೆ ಎನ್ನುವ ಭಾವನೆಯನ್ನು ಜನತೆಗೆ ಮೂಡಿಸುವಲ್ಲಿ ಬಿಜೆಪಿ ನಾಯಕರು ವಿಫಲವಾಗಿದ್ದಾರೆ ಎಂದು ಹೈಕಮಾಂಡ್ ಬೇಸರಗೊಂಡಿದೆ ಎನ್ನಲಾಗಿದೆ.
 
ಸಿದ್ದರಾಮಯ್ಯ ಸರ್ಕಾರದ ಪ್ರಬಲ ಸಚಿವರೊಬ್ಬರು ಭ್ರಷ್ಟಾಚಾರದ ಆರೋಪದ ಸುಳಿಯಲ್ಲಿ ಸಿಲುಕಿರುವಾಗ ಬಿಜೆಪಿ ನಾಯಕರು ಒಗ್ಗಟ್ಟಾಗಿ ಸರಕಾರದ ವಿರುದ್ಧ ಸಮರವೇ ಸಾರಬಹುದಿತ್ತು. ಆದರೆ, ಬಿಜೆಪಿ ನಾಯಕರು ಚಕಾರ ಎತ್ತಲಿಲ್ಲ ಎಂದು ಕೇಂದ್ರ ನಾಯಕರು ಗುಡುಗಿದ್ದಾರೆ.
 
ಆಗಸ್ಟ್ 12 ರಿಂದ ಮೂರು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಲಿರುವ ಶಾ ಅವರು ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ದುರಾಡಳಿತ ಮತ್ತು ಭ್ರಷ್ಟಾಚಾರ ಬಹಿರಂಗಪಡಿಸಲು ರಾಜಕೀಯ ರಣತಂತ್ರದ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಕಪ್ಪುಹಣ ಮತ್ತು ಭ್ರಷ್ಟಾಚಾರ ನಿರ್ಮೂಲನೆಗಾಗಿ ಹಲವಾರು ದಿಟ್ಟ ಕ್ರಮಗಳನ್ನು ಕೈಗೊಂಡ ಸಂದರ್ಭದಲ್ಲಿ, ಸಚಿವರ ನಿವಾಸದ ಮೇಲೆ ನಡೆದ ಐಟಿ ದಾಳಿಯ ಬಗ್ಗೆ ಬಿಜೆಪಿ ನಾಯಕರು ಮೌನವಾಗಿರುವುದು ಅಚ್ಚರಿ ತಂದಿದೆ.  ಟಿವಿ ಚಾನೆಲ್‌ಗಳ ಚರ್ಚಾಕೂಟದಲ್ಲಿ ಬಿಜೆಪಿಯ ಹಿರಿಯ ನಾಯಕರು ಚರ್ಚೆಯಲ್ಲಿ ಪಾಲ್ಗೊಳ್ಳುವುದು ಬಿಟ್ಟು ಕಿರಿಯ ನಾಯಕರಿಗೆ ಅವಕಾಶ ನೀಡಿದ್ದರು.ಇದರಿಂದ ಬಿಜೆಪಿ ಹೈಕಮಾಂಡ್ ಅಸಮಾಧಾನಗೊಂಡಿದೆ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾಗಿ ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

ಮುಂದಿನ ಸುದ್ದಿ
Show comments