Publish Date: Thu, 11 Sep 2025 (16:38 IST)
Updated Date: Thu, 11 Sep 2025 (16:40 IST)
ಬೆಂಗಳೂರು: ತನ್ನ ಆಡಳಿತ ಅವಧಿಯಲ್ಲಿ ಬಿಜೆಪಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ವಿಧಾನಸೌಧದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಬಗ್ಗೆ ಕೇಳಿದಾಗ ಬಿಜೆಪಿ ಅಧಿಕಾರದಲ್ಲಿದ್ದಾಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಬಹುದು ಎಂದು ಕಾನೂನು ತಂದಿದೆ.
ಚುನಾವಣಾ ಆಯೋಗದ ಉಪಕಾನೂನಿನಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಲಾಗಿದೆ. ಜಿಬಿಎ ಕಾಯ್ದೆ ಜಾರಿಗೆ ತರುವಾಗ, ಬಿಜೆಪಿ ಮಾಡಿದ್ದ ಕಾಯ್ದೆಯನ್ನೇ ಮುಂದುವರಿಸಿದ್ದೇನೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸುವುದರಲ್ಲಿ ತಪ್ಪೇನು ಇಲ್ಲ. ಈ ವಿಚಾರವಾಗಿ ಕಾನೂನು ಸಚಿವರು ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದರು.