Select Your Language

Notifications

webdunia
webdunia
webdunia
webdunia

ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ವಾಗ್ವಾದ

bangalore
bangalore , ಬುಧವಾರ, 14 ಜುಲೈ 2021 (16:06 IST)
ದಕ್ಷಿಣ ಕನ್ನಡ ಜಿಲ್ಲೆಯಬಂಟ್ವಾಳ ತಾಲೂಕಿನ ಕಾವಳಕಟ್ಟೆಯಲ್ಲಿ ನಡೆದಿದೆ. 
ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದಾಗ ಈ ಘಟನೆ ನಡೆದಿದೆ. ಕಾವಳಮೂಡೂರು ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾವಳಮೂಡೂರು ಗ್ರಾ.ಪಂ. ನೀರು ಹಾಗೂ ಮನೆ ತೆರಿಗೆ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಎರಡು  ಪಕ್ಷದ ಕಾರ್ಯಕರ್ತರ ನಡುವೆ ತಳ್ಳಾಟ ನಡೆದಿದೆ. ಆರ್.ಟಿ.ಐ.ಕಾರ್ಯಕರ್ತ ಪದ್ಮನಾಭ ಮಯ್ಯ ಮೇಲೆ ಕಾಂಗ್ರೆಸ್ ಕಾರ್ಯಕರ್ತರು  ಹಲ್ಲೆ ನಡೆಸಿದ್ದಾರೆ ಎಂದು  ಆರೋಪಿಸಲಾಗಿದೆ. 
ಈ ವೇಳೆ ಉಭಯ ಪಕ್ಷದ ಕಾರ್ಯಕರ್ತರು ಧಿಕ್ಕಾರ ಕೂಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತು. 
ಪುಂಜಾಲಕಟ್ಟೆ ಎಸ್ ಐ ಸೌಮ್ಯ ಮಧ್ಯಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದರು. ಕಾರ್ಯಕರ್ತರನ್ನು ಲಾಟಿ ಬೀಸಿ ಪೊಲೀಸರು ಚದುರಿಸಿದರು. 
ಕಾಂಗ್ರೆಸ್  ಕಾರ್ಯಕರ್ತರಾದ ಸದಾನಂದ ಶೆಟ್ಟಿ, ಬಿ.ಆರ್.ಅಂಚನ್ ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ.
ಪುಂಜಾಲಕಟ್ಟೆ ಪೋಲೀಸರು ಆಸ್ಪತ್ರೆಯಲ್ಲಿ ದಾಖಲಾದವರ ಹೇಳಿಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಸುದ್ದಿ ತಿಳಿದು ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ, ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಸ್ಥಳಕ್ಕಾಗಮಿಸಿದರು. 
ಪುಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸರಕಾರಿ ನೌಕರರ ಡಿಎ ಶೇ.28ರಷ್ಟು ಹೆಚ್ಚಳ