ಕೇಂದ್ರ ಸರಕಾರ ಹಾಗೂ ರಾಜ್ಯದ ಬಿಜೆಪಿ ಸರಕಾರದ ವಿರುದ್ಧ ಕೈ ಪಡೆಯ ನಾಯಕರು ಗರಂ ಆಗಿ ಪ್ರತಿಭಟನೆ ನಡೆಸಿದ್ದಾರೆ.
									
										
								
																	ನೆರೆ ಸಂತ್ರಸ್ತರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಆರೋಪಿ ಕಾಂಗ್ರೇಸ್ ಧರಣಿ ನಡೆಸಿದೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಧರಣಿ ನಡೆಸಲಾಗಿದೆ.
									
			
			 
 			
 
 			
					
			        							
								
																	ಮಾಜಿ ಸಮಾಜ ಕಲ್ಯಾಣ ಮಂತ್ರಿ ಎಚ್. ಆಂಜನೇಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ನಗರದ ತಾಲ್ಲೂಕು ಕಚೇರಿ ಮುಂಭಾಗ ಧರಣಿ ನಡೆಸಿದ್ದಾರೆ ಕೈ ಮುಖಂಡರು. ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
									
										
								
																	ರಾಜ್ಯದಲ್ಲಿ ನೆರೆ ಸಂತ್ರಸ್ತರಿಗೆ ಸರ್ಕಾರ ಸ್ಪಂದಿಸುವಂತೆ ಒತ್ತಾಯ ಮಾಡಿದ್ರು. ಸುಮಾರು 50 ಕ್ಕೂ ಹೆಚ್ಚು ಕಾಂಗ್ರೇಸ್ ಮುಖಂಡರಿಂದ ಧರಣಿ ನಡೆಯಿತು.