Publish Date: Sat, 26 Jan 2019 (15:10 IST)
Updated Date: Sat, 26 Jan 2019 (15:12 IST)
ಸಚಿವರ ವಿರುದ್ಧ ಕಪ್ಪುಬಟ್ಟೆ ಪ್ರದರ್ಶನಕ್ಕೆ ಮುಂದಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದ್ದು, ಯಾವುದೇ ಕಾರಣಕ್ಕೂ ಸಚಿವರು ಧ್ವಜಾರೋಹಣ ಮಾಡಬಾರದು ಎಂದವರನ್ನು ಬಂಧಿಸಲಾಗಿದೆ.
ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಚಿವರಿಂದ ಧ್ವಜಾರೋಹಣ ಬೇಡ. ಹೀಗಂತ ಆರೋಪಿಸಿ ಸಚಿವರ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನಕ್ಕೆ ಬಿಜೆಪಿ ಕಾರ್ಯಕರ್ತರು ಮುಂದಾದ ಘಟನೆ ನಡೆದಿದೆ.
ಚಾಮರಾಜನಗರದಲ್ಲಿ ಧ್ವಜಾರೋಹಣ ನಡೆಯುವ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಬಂಧನ ಮಾಡಲಾಗಿದೆ. ಬಂಧಿತರಲ್ಲಿ ನಗರಸಭಾ ಸದಸ್ಯ ಇದ್ದಾನೆ.
ಸಚಿವ ಪುಟ್ಟರಂಗಶೆಟ್ಟಿ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನಕ್ಕೆ ಮುಂದಾಗಿದ್ದರು ಬಿಜೆಪಿ ಕಾರ್ಯಕರ್ತರು. ಸಚಿವ ಪುಟ್ಟರಂಗಶೆಟ್ಟಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ವಿಧಾನ ಸೌಧದಲ್ಲಿ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.