Publish Date: Sun, 28 Jan 2018 (16:00 IST)
Updated Date: Sun, 28 Jan 2018 (16:07 IST)
ಬೆಂಗಳೂರು: ಬಿಜೆಪಿಯವರು ಜಾತಿ ಕನ್ನಡಕ ಹಾಕಿಕೊಂಡಿದ್ದಾರೆ. ಅವರು ಎಲ್ಲವನ್ನೂ ಆ ಕನ್ನಡಕದಿಂದಲೇ ನೋಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.
ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಮಾತನ್ನು ಹೇಳಿದ್ದಾರೆ.
ಕೋಮು ಗಲಭೆ ಹಾಗೂ ಇನ್ನಿತರ ಪ್ರಕರಣಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ಕೇಸುಗಳನ್ನು ಮಾತ್ರ ಕೈ ಬಿಡಲು ಸರ್ಕಾರ ಮುಂದಾಗಿದೆ ಎಂಬ ಬಿಜೆಪಿ ಆರೋಪ ಸರಿಯಲ್ಲ. ಈ ವಿಷಯಕ್ಕೆ ರಾಜಕೀಯ ಬಣ್ಣ ನೀಡುವುದೂ ಸಮಂಜಸವಲ್ಲ. ಯಾವುದೇ ಜಾತಿ, ಧರ್ಮದವರಾಗಿರಲಿ ಜನಪರ ಹೋರಾಟಗಳಲ್ಲಿ ಭಾಗಿಯಾಗಿರುವ ನಿರಪರಾಧಿಗಳ ವಿರುದ್ಧ ಕೇಸು ದಾಖಲಾಗಿದ್ದರೆ ವಾಪಸ್ ಪಡೆಯುತ್ತೇವೆ. ಅಲ್ಪಸಂಖ್ಯಾತರ ವಿಷಯ ಮಾತ್ರ ಏಕೆ ಪ್ರಸ್ತಾಪವಾಗುತ್ತಿದೆ ಎಂದು ಪ್ರಶ್ನಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ